Breaking News

ಬಸ್ ಮತ್ತು ಕಾರ್ ನಡುವೆ ಭೀಕರ ಅಪಘಾತ

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ನಡೆದಿದೆ.ಕಾರಿನಲ್ಲಿದ್ದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆ ನಿವಾಸಿ ಮಂಜುಳಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು. ಇನ್ನು ಗಂಭೀರ ಗಾಯಗೊಂಡಿದ್ದ ಸೋಮಣ್ಣ ಮತ್ತು ನಾಗೇಂದ್ರ ಎಂಬುವವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುಳ್ಯ ಸಮೀಪದ ಅರಂಬೂರು ಬಳಿ ರಿಕ್ಷಾವನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಕಾರು ಹಾಗೂ ಬಸ್ಸು ಢಿಕ್ಕಿಯಾಗಿದೆ. ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ಹಾಗೂ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಢಿಕ್ಕಿಯಾಗಿದೆ. ಮೃತರೆಲ್ಲರೂ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಕೋಲೂರು ಮುದುಗೆರೆಯವರು. ಕಾರಿನಲ್ಲಿದ್ದ 12 ವರ್ಷ ಪ್ರಾಯದ ತನ್ಮಯಿ ಹಾಗೂ ಇನ್ನೊಬ್ಬ ಮಹಿಳೆ ಜಯಶೀಲ ಎಂಬುವವರಿಗೆ ಗಾಯವಾಗಿದೆ. ಸ್ಥಳೀಯರೇ ಗಾಯಾಳುಗಳನ್ನು ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *