ಮಂಗಳೂರು: ರಾಜ್ಯದ ಸಮ್ಮಿಶ್ರ ಸರಕಾರದ ಭವಿಷ್ಯ ತೂಗುಯ್ಯಲೆಯಲ್ಲಿದೆ .ಈ ಮದ್ಯೆ ಸಚಿವ ಎಚ್ ಡಿ ರೇವಣ್ಣನವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೆಂಪಲ್ ರನ್ ಆರಂಭಿಸಿದ್ದಾರೆ .ಇಂದು ರಾತ್ರಿ ಕಟೀಲ್ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಧರ್ಮಸ್ಥಳ ದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ.ಕಟೀಲ್ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಪರವಾಗಿ ಕಟೀಲ್ ಅನಂತ್ ಅಸ್ರಣ್ಣ ಹಾಗೂ ಹರಿ ನಾರಾಯಣ ಅಸ್ರಣ್ಣ ಸ್ವಾಗತಿಸಿದರು .ಸರಕಾರದ ಉಳಿವಿಗಾಗಿ ಎಚ್ ಡಿ ರೇವಣ್ಣ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಿನವಿಡಿ ಟೆಂಪಲ್ ರನ್ ಮಾಡಿದ್ದಾರೆ.ಸಮ್ಮಿಶ್ರ ಸರಕಾರ ಉಳಿಯುತ್ತೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





