Breaking News

ಮಂಡ್ಯ ಶಾಸಕರ ಅಂತ್ಯಕ್ರಿಯೆ ನಡೆಸಿ ಪ್ರತಿಭಟನೆ

ಮಂಡ್ಯ: ಕಳೆದ ಕೆಲ ದಿನಗಳಿಂದ ರಾಜಕೀಯದಲ್ಲಿ ರಾಜೀನಾಮೆಯ ಹೈಡ್ರಾಮಾ ನಡೆದ ಹಿನ್ನೆಲೆಯಲ್ಲಿಮಂಡ್ಯ ಜಿಲ್ಲೆ ಶಾಸಕ ನಾರಾಯಣಗೌಡರ ವಿರುದ್ಧ ನಾರಾಯಣಗೌಡರ ಅಣಕು ಶವಯಾತ್ರೆ ನಡೆಸಿ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.ನಾರಾಯಣಗೌಡ ಅವರ ಪ್ರತಿಕೃತಿ ಸುಟ್ಟು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು .ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ವೆಂಕಟಸುಬ್ಬೇಗೌಡ, ಮುಖಂಡ ಬಸ್ ಕೃಷ್ಣೇಗೌಡ, ಜಿ.ಪಂ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಬಿ.ಎಲ್.ದೇವರಾಜು, ಎಪಿಎಂಸಿ ಅಧ್ಯಕ್ಷ ನಾಗರಾಜೇಗೌಡ, ಎಂ.ಪಿ.ಲೋಕೇಶ್, ಅಂಬಿಗರಹಳ್ಳಿ ಶಿವರಾಮು, ಪುರಸಭೆಯ ಸದಸ್ಯ ಸಂತೋಷ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರವಾಸಿ ಮಂದಿರದ ಬಳಿ ಮೈಸೂರು ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ಮಾಡಿದ ಕಾರ್ಯಕರ್ತರು ಶಾಸಕ ನಾರಾಯಣಗೌಡರ ಪ್ರತಿಕೃತಿಯನ್ನು ಸುಟ್ಟು ಧಿಕ್ಕಾರದ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಮಿನಿ ವಿಧಾನಸೌಧಕ್ಕೆ ತೆರಳಿ ಶಾಸಕ ನಾರಾಯಣಗೌಡರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆ, ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕರಿಸದಂತೆ ಸ್ಪೀಕರ್ ಅವರನ್ನು ಒತ್ತಾಯಿಸಿ ಮನವಿ ಸಲ್ಲಿಸಿದರು. ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅವರ ನೇತೃತ್ವದಲ್ಲಿ ಬಿಗಿಪೋಲಿಸ್ ಬಂದೋಬಸ್ತ್ ಏರ್ಪಡಿಸಿದ್ದರು…

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *