Breaking News

ನೇರ ವೇತನ ಪಾವತಿ ಪಟ್ಟಿ ಪ್ರಕಟಿಸಲು ಆಗ್ರಹ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ೭೬೨ ನೇರವೇತನ ಪಾವತಿ ತಾತ್ಕಾಲಿಕ ಪಟ್ಟಿ ಪ್ರಕಟವಾಗಿದ್ದು, ಕೂಡಲೇ ನೇರ ವೇತನ ಪಾವತಿ ಅಂತಿಮ ಪಟ್ಟಿ ಯನ್ನು ಪ್ರಕಟಿಸುವಂತೆ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪಂಗಡಗಳ ಪೌರಕಾರ್ಮಿ ಕರ ಮತ್ತು ನೌಕರರ ಸಂಘದ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.ಆಕ್ಷೇಪಣೆ ಸಲ್ಲಿಸುವ ಅವಧಿ ಮುಗಿದ ೨೪ಗಂಟೆಯೊಳಗೆ ಘನತ್ಯಾಜ್ಯ ವಸ್ತು ನಿರ್ವ ಹಣಾ ಕೇಂದ್ರ ಕಚೇರಿ ಎಸ್‌ಡಬ್ಲೂಎಂ ವಿಭಾಗಕ್ಕೆ ಆಕ್ಷೇಪಣೆ ಸಲ್ಲಿಸಲು ಜೂ.೧೭ರಂದು ಕಾರ್ಯನಿರ್ವಾಹಕ ಎಂಜಿನಿಯರ್ ಪತ್ರ ಬರೆದಿದ್ದು ಹಾಗೂ ಈ ಬಗ್ಗೆ ಜು.೩ರಂದು ನೆನಪೋಲೆ-೧ನ್ನು ಪಾಲಿಕೆಯ ಎಲ್ಲ ವಲಯ ಕಚೇರಿ ಸಹಾಯಕ ಆಯುಕ್ತರಿಗೆ ಪತ್ರ ನೀಡಲಾಗಿದೆ. ಆದರೆ ೧೬ ದಿನಗಳು ಗತಿಸಿದರೂ ಕೇಂದ್ರ ಕಚೇರಿಗೆ ಆಕ್ಷೇಪಣೆಗಳನ್ನು ಕಳುಹಿಸದಿರುವುದು ಗುತ್ತಿಗೆ ಪೌರಕಾರ್ಮಿಕರಲ್ಲಿ ಅನುಮಾನ ಮತ್ತು ಆತಂಕ ಮೂಡಿದೆ ಎಂದರು.ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ಪೌರಕಾರ್ಮಿಕರನ್ನು ನೇಮಕಗೊಳಿಸುವವರೆಗೂ ಸಂಘದ ಹೋರಾಟ ಮುಂದುವರೆಯುತ್ತಿದ್ದು, ನೇರ ನೇಮಕಾತಿ/ನೇರ ವೇತನ ಪಾವತಿ ಪ್ರಕ್ರಿಯೆಯಲ್ಲಿ ಪಾಲಿಕೆಯ ವಿಳಂಬ ನೀತಿ ಖಂಡನಾರ್ಹವಾಗಿದೆ ಎಂದು ಹೇಳಿದರು.ಕಳೆದ ೨೦ವರ್ಷಗಳಿಂದ ನಿರಂತರವಾಗಿ ಗುತ್ತಿಗೆ ಪೌರಕಾರ್ಮಿಕರ ಹಕ್ಕುಗಳಿಗಾಗಿ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಹೋರಾಟಗಳನ್ನು ರೂಪಿಸಿ ಸರ್ಕಾರದ ಆದೇಶ ವನ್ನು ಅನುಷ್ಠಾನಗೊಳಿಸುವಲ್ಲಿ ಸಂಘವು ಯಶಸ್ವಿಯಾಗಿದೆ. ಕೆಲ ಪಟ್ಟಭದ್ರ ಹಿತಾಸಕ್ತಿ ಗಳು ಗುತ್ತಿಗೆ ಪೌರಕಾರ್ಮಿಕರು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ವದಂತಿಯನ್ನು ಹಬ್ಬಿಸಿ ಗುತ್ತಿಗೆ ಪೌರಕಾರ್ಮಿಕರ ಹಾಗೂ ಅವಲಂಬಿತರ ದಾರಿಯನ್ನು ತಪ್ಪಿಸುತ್ತಿದ್ದಾರೆ ಮತ್ತು ನೇರ ನೇಮಕಾತಿ, ನೇರ ವೇತನ ಪಾವತಿ ಪ್ರಕ್ರಿಯೆ ತಡೆಯಲು ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.ಸಂಘದ ಕಸ್ತೂರೆವ್ವ ಬೆಳಗುಂದಿ, ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ಬಸವರಾಜ ದೊಡ್ಡಮನಿ, ದತ್ತಪ್ಪ ಅಪುಸಪೇಟ, ಕನಕಪ್ಪ ಕೊಟಬಾಗಿ, ಮಂಜುನಾಥ ನಾಗನೂರ, ಆನಂದ ಬಾವೂರ ಗೋಷ್ಠಿಯಲ್ಲಿದ್ದರು.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *