ಹುಬ್ಬಳ್ಳಿ: ಗಿಡ ಮರಗಳನ್ನು ನೆಟ್ಟು ಪೋಷಣೆ ಮಾಡುವುದು ಎಲ್ಲರ ಆದ್ಯ ಕರ್ತವ್ಯವಾಗಬೇಕು. ಈ ನಿಟ್ಟಿನಲ್ಲಿ ಜನರು ಸ್ವಯಂ ಪ್ರೇರಣೆಯಿಂದ ಸಸಿಗಳನ್ನು ನೆಟ್ಟು ಸಂರಕ್ಷಣೆ ಮಾಡಬೇಕೆಂದು ಗ್ರೀನ್ ಕರ್ನಾಟಕ ಅಸೋಸಿಯೇಷನ್ ಮುಖಂಡ ವಿಠ್ಠಲ್ ರೋಣದ ಕರೆ ಕೊಟ್ಟರು.ಗ್ರೀನ್ ಕರ್ನಾಟಕ ಅಸೋಸಿಯೇಷನ್ ಹಾಗೂ ನೃಪತುಂಗ ವಾಕರ್ಸ್ ಕ್ಲಬ್ ಆಶ್ರಯದಲ್ಲಿಂದು ನೃಪತುಂಗ ಬೆಟ್ಟದಲ್ಲಿ ಹಸಿರು ಉಳಿಸಿ ಬೆಳೆಸಿ ಜನಜಾಗೃತಿ ಹಾಗೂ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ವೇಳೆ ಮಾತನಾಡಿದ ಅವರುವಿಠ್ಠಲ್ ರೋಣದ, ಗಿಡ ಮರಗಳನ್ನು ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಎಲ್ಲರೂ ಒಗ್ಗೂಡಿ ಪರಿಸರ ಬೆಳೆಸಿ ಅವುಗಳ ರಕ್ಷಣೆ ಮಾಡಿದಾಗ ಮಾತ್ರ ಪರಿಸರ ಕಾಪಾಡುವುದರ ಜೊತೆಗೆ ಕಾಲಕಾಲಕ್ಕೆ ಮಳೆ ಬೆಳೆ ಆಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಾಯುವಿಹಾರಿಗಳಿಗೆ ಟೀ ಶರ್ಟ್ ವಿತರಿಸಿ, ನೂರಾರು ಸಸಿಗಳನ್ನು ನೆಟ್ಟು ಅರಣ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





