Breaking News

ಸೇತುವೆ ಕುಸಿದರೂ ಜಿಲ್ಲಾಡಳಿತ ತೋರಿದ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳ ನಡುವಿನ ಸಂಪರ್ಕ ಕೊಂಡಿಯಾಗಿರುವ ಮೂಲರಪಟ್ನ ಮುತ್ತೂರು ಸೇತುವೆ ಕುಸಿದು ಒಂದು ವರ್ಷ ಕಳೆದಿದೆ. ಆದರೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಸೇತುವೆ ಪುನರ್ ನಿರ್ಮಾಣಕ್ಕೆ ನಿರ್ಲಕ್ಷ ವಹಿಸಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಧರಣಿ‌ ನಡೆಸಲಾಯಿತು. ಮಂಗಳೂರಿನ ಸ್ಟೇಟ್ ಬ್ಯಾಂಕ್ ನಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಸೇತುವೆ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ ಸ್ಥಳೀಯರ ಜತೆ ಪ್ರತಿಭಟನೆ ನಡೆಸಿದ ಹೋರಾಟ ಸಮಿತಿ ಶೀಘ್ರವೇ ಸೇತುವೆಯನ್ನು ಪುನರ್ ನಿರ್ಮಾಣ ಮಾಡದಿದ್ದರೆ ಬಂದ್ ಆಚರಿಸಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.ಮೂಲರಪಟ್ನ ಪ್ರದೇಶದಲ್ಲಿ ಅವ್ಯಾಹತವಾಗಿ ಮರಳು ತೆಗೆದ ಪರಿಣಾಮವಾಗಿ ಸೇತುವೆ ಕುಸಿದಿದೆ ಎಂದು ಆಪಾದಿಸಲಾಗುತ್ತಿದೆ. ಎರಡು ತಾಲೂಕುಗಳನ್ನು ಬೆಸೆಯುವ ಈ ಸಂಪರ್ಕ ಸೇತುವೆ ಕುಸಿದು ಒಂದು ವರ್ಷ ಕಳೆದರೂ ಪುನರ್ ನಿರ್ಮಿಸುವ ಬಗ್ಗೆ ಜನಪ್ರತನಿಧಿಗಳು ನಿರಾಸಕ್ತಿ ವಹಿಸಿರುವುದು ಬೇಸರದ ಸಂಗತಿ. ಸ್ಥಳೀಯ ಶಾಸಕರು ಇತ್ತೀಚೆಗೆ ಗುರುಪುರ ಸೇತುವೆ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮದೇಕ್ಷೇತ್ರದ ಮೂಲರಪಟ್ನ ಸೇತುವೆ ಬಗ್ಗೆ ಮೌನ ವಹಿಸಿರುವುದೇಕೆ ಎಂದು ಪ್ರತಿಭಟನಾಕಾರರುಪ್ರಶ್ನಿಸಿದರು. ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿಯನ್ನು ಸ್ವೀಕರಿಸಿ, ಶೀಘ್ರವೇ ಸೇತುವೆ ಪುನರ್ ನಿರ್ಮಾಣದ ಭರವಸೆಯನ್ನು ನೀಡುವವರೆಗೆ ಪ್ರತಿಭಟನೆ ನಡೆಸಲು ಹೋರಾಟ ಸಮಿತಿ ತೀರ್ಮಾನಿಸಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *