ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ವಿಶೇಷ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣದಲ್ಲಿ ಮಾಲೀಕ ಮೊಹಮದ್ ಮನ್ಸೂರ್ ಅಲಿ ಖಾನ್ ಈ ಹಿಂದೆ ವೀಡಿಯೋ ಬಿಡುಗಡೆ ಮಾಡಿ, ರೋಷನ್ ಬೇಗ್‌ಗೆ ಐದು ಕೋಟಿ ರೂಪಾಯಿ ನೀಡಿದ್ದೇ ಎಂದು ಹೇಳಿದ್ದರು.ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಆಗಮಿಸಲು ರೋಷನ್ ಬೇಗ್‌ಗೆ ಹಲವಾರು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಗೈರು ಹಾಜರಾಗಿದ್ದರು.ಸೋಮವಾರ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲು ಮುಂದಾದ ಸಂದರ್ಭದಲ್ಲಿ ಎಸ್‌ಐಟಿ ಅಧಿಕಾರಿ ಗಿರೀಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದುಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news





