Breaking News

ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ 50 ವಿದ್ಯಾರ್ಥಿಗಳು ಅಸ್ವಸ್ಥ

ಬೆಳಗಾವಿ : ಹಲ್ಲಿ ಬಿದ್ದಿರುವ ಮದ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 50 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿರುವ ಸರಕಾರಿ ಶಾಲೆಯಲ್ಲಿ ಹಲ್ಲಿ ಬಿದ್ದ ಮದ್ಯಾಹ್ನದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳು ಊಟ ಮಾಡುವಾಗ ತಟ್ಟೆಯಲ್ಲಿ ಹಲ್ಲಿಯ ದೇಹದ ತುಂಡು ಕಾಣಿಸಿಕೊಳ್ಳುತ್ತಿದ್ದಂತೆಯೇ ಶಿಕ್ಷಕರಿಗೆ ತಿಳಿಸಿದ್ದಾರೆ ತಕ್ಷಣ ಆಹಾರ ಪಾತ್ರೆಯನ್ನು ಪರಿಶೀಲಿಸಿದಾಗ ಅಣ್ಣದ ಪಾತ್ರೆಯಲ್ಲಿ ಹಲ್ಲಿ ಬಿದ್ದಿದ್ದು ಊಟ ಸೇವನೆ ಮಾಡಿದ ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳಲು ಪ್ರಾರಂಭಿಸಿದ್ದಾರೆ ತಕ್ಷಣ ಬೆಳಗಾವಿ ಜಿಲ್ಲಾಸ್ಪತ್ರೆಗೆ ವಿದ್ಯಾರ್ಥಿಗಳನ್ನು ರವಾಣಿಸಿ ಚಿಕಿತ್ಸೆ ನೀಡಲಾಗುತ್ತಿದೆಬೆಳಗಾವಿಯ ಎನ್.ಜಿ ಓದಿಂದ ಶಾಲೆಗೆ ಆಹಾರ ವಿತರಣೆಯಾಗಿದ್ದು ವಿದ್ಯಾರ್ಥಿಗಳಿಗೆ ಊಟ ವಿತರಣೆ ಮಾಡುವಾಗ ಹಲ್ಲಿ ಪತ್ತೆಯಾಗಿದೆ ತಕ್ಷಣ ಬಿಸಿಯೂಟ ನೀಡುವುದನ್ನು ನಿಲ್ಲಿಸಿ ವಿದ್ಯಾರ್ಥಿಗಳನ್ನು ಅಂಬ್ಯೂಲೆನ್ಸ್ ಮೂಲಕ ಆಸ್ಪತ್ರೆಗೆ ರವಾಣಿಸಲಾಯಿತು ಎಂದು ಆಹಾರ ವಿತರಕಿ ಶಂಕರವ್ವಾ ಜಂಬಲವಾಡಿ ತಿಳಿಸಿದ್ದಾರೆಜಿಲ್ಲಾ ಆರೋಗ್ಯ ಅಧಿಕಾರಿ ಪಟ್ಟೇದ ಮಾದ್ಯಮಗಳೊಂದಿಗೆ ಮಾತನಾಡಿ ಸುಮಾರು 102 ವಿದ್ಯಾರ್ಥಿಗಳು ಆಹಾರ ಸೇವನೆ ಮಾಡಿದ್ದು ಪಾತ್ರೆಯಲ್ಲಿ ಹಲ್ಲಿ ಬಿದ್ದಿರುವದನ್ನು ನೋಡಿ ಕೊನೆಗೆ ಊಟ ಮಾಡಿದ ಸುಮಾರು 50 ವಿದ್ಯಾರ್ಥಿಗಳನ್ನು ಮಂಜಾಗೃತವಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳಿಗೇ ಯಾವುದೇ ತೊಂದರೆಯಾಗಿಲ್ಲ ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು

Share News

About admin

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *