Breaking News

ಮಳೆಯಿಂದಾಗಿ ಮನೆ ಕುಸಿದು ವ್ಯಕ್ತಿ ಗಂಭೀರ ಗಾಯ

ಹುಬ್ಬಳ್ಳಿ: ನಗರದಲ್ಲಿ ಸುರಿದ ಮಳೆಗೆ ಮನೆ ಕುಸಿದ ಪರಿಣಾಮ ಓರ್ವನಿಗೆ ಗಂಭೀರ ಗಾಯವಾಗಿದ್ದು, ಅಪಾರ ಪ್ರಮಾಣದ ವಸ್ತುಗಳು ಹಾನಿಯಾದ ಘಟನೆ ಹೆಗ್ಗೇರಿಯ ಜೆಪಿನಗರದಲ್ಲಿ ನಡೆದಿದೆ.ಕಾಟವೆ ಎಂಬುವರಿಗೆ ಸೇರಿದ್ದ ಮನೆ ಇದ್ದಾಗಿದ್ದು, ನಗರದಲ್ಲಿ ಎರಡು ದಿನಗಳ‌ ಹಿಂದೆ ಸುರಿದ ಮಳೆಗೆ ಮನೆಯ ಗೋಡೆಗಳೆಲ್ಲಾ ಏಕಾಏಕಿ ಕುಸಿದಿವೆ. ಆ ಸಮಯದಲ್ಲಿ ಮನೆಯಲ್ಲಿದ್ದ ಪುಂಡಲೀಕ ಕಾಟವೆ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಮನೆಯ ಕುಸಿತದಿಂದ ಮನೆಯಲ್ಲಿದ್ದ ವಸ್ತುಗಳೆಲ್ಲಾ ನಜ್ಜುಗುಜ್ಜಾಗಿವೆ. ಇದರಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಮನೆಯವರು ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *