ಯಾದಗಿರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಸಿಎಂ ಆಗಲಿ ಎಂದು ಹಾರೈಸಿ ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ನಡೆಸಿದ್ದಾರೆ.ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮಹಾಂತೇಶ್ವರ ಮಂದಿರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಮಾಗನೂರ ನೇತೃತ್ವದಲ್ಲಿ ಬಿ.ಎಸ್.ವೈ ಸಿಎಂ ಆಗಲು ಪೂಜೆ ನಡೆಸಲಾಯಿತು. ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪೂಜೆಯಲ್ಲಿ ಭಾಗವಹಿಸಿ ಬಿ.ಎಸ್.ವೈ ಸಿಎಂ ಅಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





