ಮಂಡ್ಯ: ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದಆರೋಗ್ಯವಂತ ಮಕ್ಕಳ ಸ್ಪರ್ಧೆ ನಡೆಯಿತು.ಸ್ಪರ್ಧೆಯಲ್ಲಿ ವಿಜೇತರಾದ ಮೂವರು ಮಕ್ಕಳಿಗೆ ನಗಧು ಬಹುಮಾನವನ್ನು ವಿತರಿಸಿದ ಹಿರಿಯ ಪುರಸಭೆ ಸದಸ್ಯೆ ಮಹಾದೇವಿನಂಜುಂಡ ಮಾತನಾಡಿ ತಾಯಂದಿರು ಮಕ್ಕಳ ಆರೋಗ್ಯದ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಆರೋಗ್ಯ ಇಲಾಖೆಯು ಉಚಿತವಾಗಿ ನೀಡುತ್ತಿರುವ ಲಸಿಕೆಗಳನ್ನು ಮಕ್ಕಳಿಗೆ ಕಡ್ಡಾಯವಾಗಿ ಕೊಡಿಸುವ ಮೂಲಕ ಮಕ್ಕಳ ಆರೋಗ್ಯ ಸಂವರ್ಧನೆಗೆ ಮುಂದಾಗಬೇಕು ಎಂದು ಮನವಿ ಮಾಡಿದ ಮಹದೇವಿ ಒಂದು ಮಗುವಿನ ನಂತರ ಮತ್ತೊಂದು ಮಗುವಿಗೆ ಕನಿಷ್ಠ ಮೂರು ವರ್ಷಗಳು ಅಂತರವಿರಬೇಕು..ಕಡ್ಡಾಯವಾಗಿ ಒಂದು ಅಥವಾ ಎರಡು ಮಕ್ಕಳಿಗೆ ಕುಟುಂಬ ಕಲ್ಯಾಣ ನಿಯಂತ್ರಣಕ್ಕೆ ಮುಂದಾಗಬೇಕು. ಟ್ಯೂಬೆಕ್ಟಮಿ ಆಪರೇಷನ್ ಮಾಡಿಸಿಕೊಂಡು ಮಕ್ಕಳಾಗದಂತೆ ಎಚ್ಚರ ವಹಿಸಬೇಕು ಎಂದು ಮಹದೇವಿ ಕಿವಿಮಾತು ಹೇಳಿದರು . ಪುರಸಭೆ ಸದಸ್ಯರಾದ ಡಿ.ಪ್ರೇಮಕುಮಾರ್, ಭಾಗ್ಯ ಉಮೇಶ್, ಆರೋಗ್ಯ ಕಾರ್ಯಕರ್ತೆಯರಾದ ಲೀಲಮ್ಮ, ವಸಂತಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆಯರಾದ ಕುಮಾರಿ, ತೇಜೇಶ್ವರಿ, ಸವಿತಾ, ಆಶಾ ಕಾರ್ಯಕರ್ತೆಯರಾದ ಕೆ.ಭಾಗ್ಯ, ಮಮತಾ, ಬಿ.ಎಸ್.ಅಶ್ವಿನಿ ಮತ್ತು ಮಕ್ಕಳ ತಾಯಂದಿರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





