Breaking News

ಮಂಗಳೂರಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆ

ಮಂಗಳೂರು: ಮಂಗಳೂರಿನಲ್ಲಿ ಮತ್ತೆಮಳೆ ಚುರುಕುಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದ್ದು ಇಂದು ದಿನವಿಡೀ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರು ನಗರದಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ಸಂಚಾರಕ್ಕೆ ಅಡ್ಡಿ ಉಂಟಾಯ್ತು. ಇನ್ನೂ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಯ್ತು. ನೇತ್ರಾವತಿ, ಕುಮಾರಧಾರ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ನದಿ ಪ್ರದೇಶದಲ್ಲಿ ವಾಸಿಸುವ ಜನರ್ರಿಗೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನೂ 3, 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *