ಮಂಡ್ಯ: ಜಿಲ್ಲೆಯ ಚಿಕ್ಕೋಸಹಳ್ಳಿ ಗ್ರಾಮದ ಹೊರವಲಯದ ಶ್ರವಣಬೆಳಗೊಳ ರಸ್ತೆಯಲ್ಲಿ ಭಾರತೀಪುರ ಬಳಿಯ ಉಪ್ಪಾರ್ ಕ್ಯಾಂಪ್ ಗೆ ಡೀಸೆಲ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಗೆ ಆಕಸ್ಮಿಕ ಬೆಂಕಿ ಹೊತ್ತುಕೊಂಡು ಉರಿದಿದೆ.ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗ್ನಿಶಾಮಕ ಠಾಣಾಧಿಕಾರಿ ಶ್ರೀನಿವಾಸರಾವ್ ಅವರ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿಬೆಂಕಿ ನಂಧಿಸಿ ಅಪಾರ ಹಾನಿ ತಪ್ಪಿಸಿದ್ದಾರೆ. ಇದ್ದಕ್ಕಿದ್ದಂತೆ ಲಾರಿಯ ಕ್ಯಾಬಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಾಗ ಲಾರಿಯ ಚಾಲಕ ಸಂಗಣ್ಣ ಅವರು ಕೆ.ಆರ್.ಪೇಟೆ ಪಟ್ಟಣದ ಅಗ್ನಿಶಾಮಕ ಠಾಣೆಗೆ ಸುದ್ದಿ ಮುಟ್ಟಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂಧಿಗಳ ಕಾರ್ಯಾಚರಣೆ ಶುರುಮಾಡಿದ್ದಾರೆ.ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಹೇಮಾವತಿ ಜಲಾಶಯ ಯೋಜನೆಯ ನಾಲೆಗಳ ಆಧುನೀಕರಣ ಕಾಮಗಾರಿ ನಡೆಸುತ್ತಿರುವ ಪ್ರಥಮದರ್ಜೆ ಗುತ್ತಿಗೆದಾರ ಉಪ್ಪಾರ್ ಕ್ಯಾಂಪ್ ವಾಹನಗಳಿಗೆ ಡೀಸೆಲ್ ಕೊಂಡೊಯ್ಯುತ್ತಿದ್ದ ವೇಳೆ ಪ್ರಕರಣ ನಡೆದಿದೆ. ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಮತ್ತು ಜನರ ಓಡಾಟವನ್ನು ನಿಯಂತ್ರಿಸಿ ಬೆಂಕಿ ಹಚ್ಚಿಕೊಂಡಿದ್ದ ಲಾರಿಯ ಬೆಂಕಿ ಆರಿಸಲು ಅಗ್ನಿಶಾಮಕ ಸಿಬ್ಬಂಧಿಗಳಿಗೆ ಅನುವು ಮಾಡಿಕೊಟ್ಟರು.ಡೀಸೆಲ್ ಟ್ಯಾಂಕರ್ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನೂರಾರು ಜನರು ವೀಕ್ಷಿಸಿ ಅಗ್ನಿಶಾಮಕ ಸಿಬ್ಬಂಧಿಗಳ ಸಾಹಸವನ್ನು ಕೊಂಡಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





