ಮಂಡ್ಯ: ದಂಪತಿಗಳನ್ನು ಅವರ ಮನೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.ರಾಯಸಮುದ್ರ ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ಕೊಲೆಯಾಗಿರುವ ದುದೈ್ವಿ ದಂಪತಿಗಳಾಗಿದ್ದಾರೆ.ಕಳೆದ ಎರಡು ದಿನಗಳಿಂದ ಮನೆಗೆ ಬೀಗ ಹಾಕಿದ ಸ್ಥಿತಿಯಲ್ಲಿದ್ದಾಗ ಅಕ್ಕಪಕ್ಕದ ಮನೆಯವರು ಕಿಟಕಿಯಲ್ಲಿಮನೆಯೊಳಗೆ ಏನಸಗಿದೆ ಎಂದು ನೋಡಿದಾಗ ದಂಪತಿಗಳು ಬರ್ಬರವಾಗಿ ಕೊಲೆಯಾಗಿ ಇರುವುದು ಕಂಡುಬಂದಿದೆ .ಕೂಡಲೇ ಪಟ್ಟಣ ಪೊಲೀಸರಿಗೆ ರಾಯಸಮುದ್ರ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಸುಧಾಕರ್, ಕೆ .ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ವೆಂಕಟೇಶ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ವಕೀಲರ ಸಂಘದ ನಿರ್ದೇಶಕರಾದ ಆರ್.ಎನ್.ದೇವಾನಂದ್, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್ .ಜಿ ಮಂಜು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್ ಕೆ ಕುಮಾರ್, ಮಾಜಿ ಉಪಾಧ್ಯಕ್ಷ ಅಂಬರೀಶ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿದ ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಮಂಜು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಆರ್.ಎನ್.ದೇವಾನಂದ್ ಅವರು ಗ್ರಾಮದಲ್ಲಿ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ದಂಪತಿಗಳಾದ ರಾಯಸಮುದ್ರ ಗುಂಡಣ್ಣ ಮತ್ತು ಲಲಿತಮ್ಮ ಅವರನ್ನು ಹತ್ಯೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪೊಲೀಸರನ್ನು ಒತ್ತಾಯ ಮಾಡಿದರು.ಘಟನೆ ಕುರಿತು ಕೆಆರ್ ಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





