Breaking News

ಮಂಡ್ಯ ರಾಯಸಮುದ್ರ ಗ್ರಾಮದಲ್ಲಿ ದಂಪತಿಗಳ ಭರ್ಭರ ಹತ್ಯೆ…ಎಸ್.ಪಿ ಶಿವಪ್ರಕಾಶ್ ಪರಿಶೀಲನೆ.

ಮಂಡ್ಯ: ಜಿಲ್ಲೆಯ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದಲ್ಲಿ ದುಷ್ಕರ್ಮಿಗಳುದಂಪತಿಗಳ ಕಗ್ಗೊಲೆ ಮಾಡಿ ಮನೆಯ ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ. ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ದಂಪತಿಗಳೇ ಕೊಲೆಯಾಗಿರುವ ನತದೃಷ್ಟರು. ಸ್ಥಳಕ್ಕೆ ಕೆ.ಆರ್.ಪೇಟೆ ಪಟ್ಟಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಢಾಧಿಕಾರಿ ಶಿವಪ್ರಕಾಶ್ ದೇವರಾಜು, ಡಿವೈಎಸ್ ಪಿ ವಿಶ್ವನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು…ಕೊಲೆಯಾಗಿ ನಾಲ್ಕು ದಿನಗಳಾಗಿರುವ ಶಂಕೆ ವ್ಯಕ್ತಪಡಿಸಿರುವ ಗ್ರಾಮಸ್ಥರು…ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಬಾಗಿಲು ತೆಗೆದು ನೋಡಿದಾಗ ಕೃತ್ಯ ಬಯಲಾಗಿದೆ ಎಂದು ಗ್ರಾಮದ ಮುಖಂಡ ವಕೀಲ ದೇವಾನಂದ ತಿಳಿಸಿದ್ದಾರೆ….ಜಿಲ್ಲಾ ಪಂಚಾಯತ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಹರಳಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅದ್ಯಕ್ಷ ಕರ್ತೇನಹಳ್ಳಿ ಸುರೇಶ್, ಹರಳಹಳ್ಳಿ ವಿಶ್ವನಾಥ, ಮನ್ ಮುಲ್ ನಿರ್ದೇಶಕ ಎಸ್.ಅಂಬರೀಶ್ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು…

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *