ಮಂಗಳೂರು: ಕಾರು, ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡಿನ ಬ್ರಹ್ಮರಕೂಟ್ಲುವಿನಲ್ಲಿ ನಡೆದಿದೆ.ಗೋವಿಂದ, ಪದ್ಮಾವತಿ, ನಾಗರಾಜ ಮತ್ತು ಗಣೇಶ ಮೃತಪಟ್ಟವ್ರು. ಇಂದು ಮಧ್ಯಾಹ್ನ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮರಕೂಟ್ಲು ಎಂಬಲ್ಲಿ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟವೇರಾ ಕಾರು ಮತ್ತು ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಮಧ್ಯೆ ಅಪಘಾತವಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಒಂದೇ ಕುಟುಂಬದ 11 ಜನರ ಪೈಕಿ ನಾಲ್ವರು ಮೃತ ಪಟ್ಟಿದ್ದಾರೆ. ಉಳಿದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರು ನಗರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





