ಮಂಡ್ಯ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಮಿತಿಯ ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕೆ.ಆರ್.ಪೇಟೆ ಸಮಾರಂಭವು ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದಲಿತ ಶಿಕ್ಷಣ ಅಭಿವೃದ್ಧಿ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ
ಜುಲೈ 19ರ ಶುಕ್ರವಾರ ಮಧ್ಯಾಹ್ನ 12ಗಂಟೆಗೆ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ಘಟಕದ ನಿಯೋಜಿತ ಅಧ್ಯಕ್ಷ ಎಂ.ರಮೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಎನ್.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಮಿತಿಯ ರಾಜ್ಯಾಧ್ಯಕ್ಷ ತಿಮ್ಮರಾಯಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿನುಜೋಸೆಫ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಲಿತಾರೆಡ್ಡಿ, ರಾಜ್ಯ ಘಟಜದ ಸಂಚಾಲಕ ಶರತ್ ಚಂದ್ರ, ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಲಿಂಗಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಮತಾ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ
ಜಿಲ್ಲಾ ಛಲವಾಧಿ ಮಹಾಸಭಾದ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಂ ಮತ್ತು ಪುರಸಭೆಯ ಹಿರಿಯ ಸದಸ್ಯ ಡಿ.ಪ್ರೇಮಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆದ್ದರಿಂದ ಯುವಕ ಯುವತಿಯರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಪ್ರಗತಿಪರ ಚಿಂತಕರು, ಸಾಮಾಜಿಕ ಕಾರ್ಯಕರ್ತರು ಈ ಅರ್ಥಪೂರ್ಣ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಎಂ.ರಮೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಎನ್.ಶ್ರೀನಿವಾಸ್ ಮನವಿ ಮಾಡಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





