Breaking News

ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಪ್ರತಿಭಟನೆ

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಮಂಗಳೂರಲ್ಲಿ ಪಕ್ಷದ ಕಚೇರಿಯ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಘೋರವಾಲ ಎಂಬಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಗಲಭೆ ನಡೆದಿತ್ತು. ಈ ವೇಳೆ ಹತ್ಯೆಗೀಡಾದ ಹತ್ತು ಮಂದಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿ ಬಿಜೆಪಿ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಅಲ್ಲದೆ ಬಿಜೆಪಿಗರು ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದ್ದಾರೆ ಎಂದು ಆಪಾದಿಸಿದರು.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *