ಮಂಡ್ಯ: ಪಟ್ಟಣದ ಕೆ ಆರ್.ಪೇಟೆಯಲ್ಲಿ ಪಿಎಲ್ ಡಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಯುವಮುಖಂಡ ಕಬ್ಬಲಗೆರೆ ಪುಟ್ಟಸ್ವಾಮಿಗೌಡ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿಗೌಡ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಕೆಯುಐಡಿಎಫ್ ಸಿ ಮಾಜಿಅಧ್ಯಕ್ಷ ಮತ್ತಿಘಟ್ಟ ಕೃಷ್ಣಮೂರ್ತಿ, ಪಿ.ಎಲ್.ಡಿ ಬ್ಯಾಂಕ್ ಮಾಜಿಅಧ್ಯಕ್ಷ ವಿಶ್ವನಾಥ, ಕೆ.ಬಿ.ರವಿಕುಮಾರ್, ಪುರಸಭೆ ಹಿರಿಯ ಸದಸ್ಯ ಡಿ.ಪ್ರೇಮಕುಮಾರ್, ಕೆ.ಸಿ.ಮಂಜುನಾಥ ಮತ್ತಿತರರು ಅಭಿನಂದಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





