Breaking News

ಅಂತರರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಶಹರ್ ಠಾಣೆಯ ಪೋಲಿಸರು ಯಶಸ್ವಿ.

ಹುಬ್ಬಳ್ಳಿ:ದುರ್ಗದಬೈಲ್ ಎಂಬಲ್ಲಿ ನಡೆದ ಬೆಳ್ಳಿ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧ ಇಬ್ಬರು ಅಂತರರಾಜ್ಯ ಕಳ್ಳರನ್ನು ಶಹರ್ ಠಾಣೆಯ ಪೋಲಿಸರು ಅರೆಸ್ಟ್ ಮಾಡಿದ್ದಾರೆ.ಹುಬ್ಬಳ್ಳಿಯ ದುರ್ಗದಬೈಲ್ ನ ನಾರಾಯಣ ಇಳಕಲ್ ಎಂಬುವವರ ಅಂಗಡಿಯಲ್ಲಿ ಸುಮಾರು 3 ಲಕ್ಷ 50 ಸಾವಿರ ನಗದು, 39 ಕೆಜಿ ಬೆಳ್ಳಿ ಆಭರಣ ಕಳ್ಳತನ ಪ್ರಕರಣ ನಡೆದಿತ್ತು. ಈ ಸಂಬಂಧ ನಗರದ ಶಹರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನಟ್ಟಿದ ಪೋಲಿಸರು ಹುಬ್ಬಳ್ಳಿಯ ಗಬ್ಬರೂ ಬಳಿ ಕಳ್ಳರನ್ನು ಬಂಧಿಸಿದ್ದಾರೆ. ರಾಜಸ್ತಾನ ಮೂಲದ ಮುಖೇಶ್ ಸಾರನ್, ಬೆಂಗಳೂರು ಮೂಲದ ಭುಂದುರಾಮ್ ಡಯ್ಯಾ ಬಂಧಿತರು.ಬಂಧಿತರಿಂದ 11/2 ಬೆಳ್ಳಿ , ಕೃತ್ಯಕ್ಕೆ ಬಳಸಿದ ಮಾರುತಿ ಕಾರು ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆದುಕೊಂಡಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು, ಶೋಧ ಮುಂದುವರೆದಿದೆ.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *