ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ ಜನಪ್ರಿಯ ಶಾಸಕರು, ಜನಪರ ಹೋರಾಟಗಾರರು, ಆತ್ಮೀಯ ಬಂಧುಗಳಾದ, ಡಾ.ಕೆ.ಸಿ.ನಾರಾಯಣಗೌಡ ಅವರ 57ನೇ ಹುಟ್ಟು ಹಬ್ಬದ ಅಂಗವಾಗಿ ಕೆ.ಆರ್.ಪೇಟೆ ಪಟ್ಟಣದ ಶ್ರೀ ಚನ್ನಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು, ನಾರಾಯಣಗೌಡ ಅಭಿಮಾನಿ ಬಳಗದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಹಾಗೂ ಶಾಸಕರ ನಿವಾಸದ ಆವರಣದಲ್ಲಿ ಅಭಿಮಾನಿಗಳಿಂದ ಹುಟ್ಟು ಹಬ್ಬದ ಕೇಕ್ ಕತ್ತರಿಸಿ ವಿತರಿಸುವ ಕಾರ್ಯಕ್ರಮವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಶಾಸಕ ನಾರಾಯಣಗೌಡರ ಆಪ್ತ ಸಹಾಯಕ ದಯಾನಂದ ಮತ್ತು ನಾರಾಯಣಗೌಡರ ಅಭಿಮಾನಿ ಬಳಗದ ಅಧ್ಯಕ್ಷ ಚಂದ್ರಮೋಹನ್ ಮನವಿ ಮಾಡಿದ್ದಾರೆ….
bigtvnews | Hubli Dharwad News | Kannada News | Karnataka News Hubli News | News In Hubli | Local news





