Breaking News

ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿರುವ ಪ್ರಾಂಶುಪಾಲ ಹಾಗೂ ಉಪನ್ಯಾಸಕ

ಮಂಡ್ಯ: ಜಿಲ್ಲೆಯ ಶೀಳನೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಗುರುಲಿಂಗೇಗೌಡ ಮತ್ತು ಉಪನ್ಯಾಸಕ ಕತ್ತರಘಟ್ಟ ವಾಸು ಅವರು ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ಹಾಗೂ ದೌರ್ಜನ್ಯ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳನ್ನು ವಿಂಗಡಿಸಿ ಬೇಧಭಾವ ಮಾಡಿ ಮಾನಸಿಕ ಕಿರುಕುಳ ನೀಡುತ್ತಾ ಹಿಂಸೆ ನೀಡುತ್ತಿರುವ ಪ್ರಾಂಶುಪಾಲ ಮತ್ತು ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿಗಳು ತಿರುಗಿ ಬಿದ್ದಿದ್ದಾರೆ.
ಬಡವರು ಶ್ರೀಮಂತರು ಮತ್ತು ಪ್ರಭಾವಿಗಳ ಮಕ್ಕಳೆಂದು ತಾರತಮ್ಯ ಮಾಡುವ ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಗ್ರಾಮದ ಯುವಮುಖಂಡ ದಿನೇಶ್ ಆಗ್ರಹಿಸಿದರು.
ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳದ ಬಗ್ಗೆ ಮನಬಿಚ್ಚಿ ಮಾತನಾಡಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *