ಮಂಗಳೂರು: ಡೆಂಗ್ಯು ರೋಗ ನಿಯಂತ್ರಣ ಅಂಗವಾಗಿ ಇಂದು ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಮಹಾನಗರಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆಂದೋಲನ ನಡೆಯಿತು. ಡೆಂಗ್ಯು ವ್ಯಾಪಕವಾಗಿ ಕಂಡುಬಂದಿರುವ ಗುಜ್ಜರಕೆರೆ, ಬೋಳಾರ, ಎಮ್ಮೆಕೆರೆ, ಮಹಾಕಾಲಿಪಡ್ಪು, ಮಂಗಳಾದೇವಿ ಈ. ಪ್ರದೇಶಗಳನ್ನು *ಗ್ರಿಡ್ 1* ಎಂದು ಪರಿಗಣಿಸಿ ವ್ಯವಸ್ಥಿತವಾಗಿ ಇಂದು ಈ ಪ್ರದೇಶಗಳಲ್ಲಿ ತೀವ್ರ ಪರಿಶೀಲನೆ, ತಪಾಸಣಾ ಚಟುವಟಿಕೆ ನಡೆಸಲಾಯಿತು.ಸುಮಾರು 250 ಕ್ಕೂ ಅಧಿಕ ಸಿಬ್ಬಂದಿಗಳು, ಸ್ವಯಂ ಸೇವಕರು, ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು.ಈ ಪ್ರದೇಶಗಳ ಮನೆ, ಉದ್ದಿಮೆ, ಅಂಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು. ರೋಗ ನಿಯಂತ್ರಣ, ಸೊಳ್ಳೆ ಉತ್ಪತ್ತಿ ತಾಣಗಳಿಗೆ ಅವಕಾಶ ನೀಡದಂತೆ ಜಾಗೃತಿ ಮೂಡಿಸಲಾಯಿತು.ಇದಲ್ಲದೇ,ಹಲವು ದಿನಗಳಿಂದ ನೀರು ನಿಂತು ಸೊಳ್ಳೆ ಉತ್ಪತ್ತಿಗೆ ಕಾರಣವಾದವರಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು.ಡೆಂಗೀ ಜ್ವರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ .ಸಾರ್ವಜನಿಕ ಸ್ಥಳಗಳಲ್ಲಿ ಸೊಳ್ಳೆ ಉತ್ಪಾದನೆಗೆ ಕಾರಣ ರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು .ಈಗಾಗಲೇ ಎರಡು ದಿನದಲ್ಲಿ 85 ಸಾವಿರ ದಂಡ ವಸೂಲಿ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದರು .ಬೈಟ್ಡೆಂಗೀ ಜ್ವರ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಬಹಳಷ್ಟ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಎಲ್ಲೆಡೆ ನಿಗಾ ವಹಿಸಲಾಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





