ಮಂಡ್ಯ: ಜಿಲ್ಲೆಯ ಕೆ. ಆರ್. ಪೇಟೆಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ನಡೆಯಿತು.ಮಂಡ್ಯ ಜಿಲ್ಲೆ ಮಂಡ್ಯ ಕೆ. ಆರ್.ಪೇಟೆ ತಹಶಿಲ್ದಾರ್ ಎಂ.ಶಿವಮೂರ್ತಿ ಕಾರ್ಯಾಗಾರವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು.ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾಪ್ರಪಂಚದಲ್ಲಿ ಯುವಜನರು ಹಾಗೂ ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಅಳವಡಿಸಿಕೊಂಡು, ತಮ್ಮಲ್ಲಿನ ಕೀಳರಿಮೆಯನ್ನು ಅಳಿಸಿಹಾಕಿ ಆತ್ಮವಿಶ್ವಾಸದಿಂದ ಮುನ್ನಡೆದು ಗುರಿಸಾಧನೆಯತ್ತ ಹೆಜ್ಜೆಹಾಕಬೇಕು.ಸಮಾಜದಲ್ಲಿನ ಶೋಷಿತರು ಹಾಗೂ ತುಳಿತಕ್ಕೊಳಗಾದವರಿಗೆ ಕೈಲಾದ ಸಹಾಯವನ್ನು ಮಾಡಬೇಕು. ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ನಿಸ್ವಾರ್ಥಿಗಳಾಗಿ ಸೇವಾಮನೋಭಾವನೆ ಹಾಗೂ ಪರೋಪಕಾರ ಗುಣಗಳನ್ನು ಮೈಗೂಡಿಸಿಕೊಂಡು ಮುನ್ನಡೆದು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಶಿವಮೂರ್ತಿ ಕರೆ ನೀಡಿದರು. ಇದೇ ಸಂದರ್ಭದಲ್ಲಿ ತಹಶಿಲ್ದಾರ್ ಶಿವಮೂರ್ತಿ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಡಾ.ಸಿ.ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು..ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ.ಟಿ.ಎಂ.ದೇವರಾಜು ವೃತ್ತಿಕೌಶಲ್ಯ ಮಾರ್ಗದರ್ಶನ ಉಪನ್ಯಾಸ ನೀಡಿದರು.ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಡಾ.ಕೆ.ಆರ್.ನೀಲಕಂಠ, ಪ್ರಾಧ್ಯಾಪಕರಾದ ನಂಜುಂಡಯ್ಯ, ಪ್ರಮೋಧಿನಿಗೌಡ ಮಾತನಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





