Breaking News

5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಚರಣೆಗೆ ಸಿದ್ದತೆಯ ಸಭೆ

ಮಂಡ್ಯ: 5ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆ ಮಂಡ್ಯ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಜುಲೈ-31 ರಂದು ಆಚರಣೆ ಮಾಡುವ ಸಂಬಂಧ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಜಿಲ್ಲಾ ಪಂಚಾಯತಿ ಸದಸ್ಯರಾದ ಬಿ.ಎಲ್.ದೇವರಾಜು, ರಾಮದಾಸು, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರೇವಣ್ಣ, ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಕಸಾಪ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಅಕ್ಕಿಹೆಬ್ಬಾಳು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಿರುವ ಬಿ.ಜಯಶ್ರೀ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಕೆ.ಆರ್.ಪೇಟೆ ತಾಲ್ಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ಥಬ್ದ ಚಿತ್ರಗಳು ಹಾಗೂ ಭಿತ್ತಿ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಕನ್ನಡಾಭಿಮಾನವನ್ನು ಬೆಳೆಸಲು ಸಹಕಾರಿಯಾಗಲಿದೆ. ಕನ್ನಡಮ್ಮನ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸೋಣ ಎಂದು ಬಿ.ಎಲ್.ದೇವರಾಜು ಸಲಹೆ ನೀಡಿದರು…

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *