ಮಂಗಳೂರು: ಖಾಸಗಿ ಬಸ್ ಮತ್ತು ಲಾರಿ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರಿನ ಮೂಡಬಿದ್ರೆ ಸಮೀಪದ ತೋಡಾರ್ ಬಳಿ ನಡೆದಿದೆ. ಅಪಘಾತದಲ್ಲಿ ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಮೂಡಬಿದ್ರೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್ ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ತೋಡಾರ್ ಮಸೀದಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಎದುರು ಭಾಗ ನುಜ್ಜುಗುಜ್ಜಾಗಿದೆ. ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





