Breaking News

ಗಣಿತ , ವಿಜ್ಞಾನ ವಿಷಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದ ಆಶೀರ್ವಾದ ಪ್ರೌಢಶಾಲೆಯ ಆವರಣದಲ್ಲಿ ತಾಲ್ಲೂಕಿನ ಪ್ರೌಢಶಾಲೆಯ ಗಣಿತ ಮತ್ತು ವಿಜ್ಞಾನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಎನ್.ಟಿ.ಎಸ್.ಇ ಮತ್ತು ಎನ್.ಎಂ.ಎಂ.ಎಸ್ ಕಾರ್ಯಾಗಾರದಲ್ಲಿ ಗಣಿತ-ವಿಜ್ಞಾನ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ತರಬೇತಿ ಸಂಸ್ಥೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ NTSE ಮತ್ತು NMMS ಪರೀಕ್ಷಾ ಸಂಬಂಧ ನಡೆದ ತರಬೇತಿ ಕಾರ್ಯಾಗಾರವನ್ನು ಡಯಟ್ ಪ್ರಾಂಶುಪಾಲರಾದ ಎಂ.ಶಿವಮಾದಪ್ಪ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಕ್ಕಳು ಆತ್ಮವಿಶ್ವಾಸ ಹಾಗೂ ಜಾಣ್ಮೆಯಿಂದ ಪರೀಕ್ಷೆಯನ್ನು ಎದುರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಬೇಕು. ಶ್ರದ್ಧೆಯಿಂದ ಹಾಗೂ ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿಸಾಧನೆಯತ್ತ ಹೆಜ್ಜೆ ಹಾಕಬೇಕು ಎಂದು ಶಿವಮಾದಪ್ಪ ಮನವಿ ಮಾಡಿದರು.ಬಿಇಓ ಎಸ್.ರೇವಣ್ಣ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಾಗಾರದಲ್ಲಿ ಡಯಟ್ ನೋಡೆಲ್ ಅಧಿಕಾರಿ ಕಾಂತಶ್ರೀ, ಕ್ಷೇತ್ರಸಮನ್ವಯಾಧಿಕಾರಿ ಎಂ.ಲಿಂಗರಾಜು, ಡಯಟ್ ಉಪನ್ಯಾಸಕರಾದ ಜಯಶಂಕರ್, ಸಂಪನ್ಮೂಲ ವ್ಯಕ್ತಿಗಳಾದ ಬಿ.ಶಿವಕುಮಾರ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್.ಚಂದ್ರಶೇಖರ್, ಶಿಕ್ಷಣ ಸಂಯೋಜಕರಾದ ಎ.ನಾಗೇಶ್, ಜಿ.ನೀಲಾಮಣಿ, ಸೋಮಶೇಖರ್, ವೇಣುಗೋಪಾಲ್, ಬಿಪಿಇಆರ್ ಟಿ ಗಳಾದ ಎಂ.ಡಿ.ಯೋಗೇಂದ್ರ ಹಾಗೂ ಪ್ರೌಢಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *