Breaking News

ನಾಡಕಚೇರಿ, ಹೋಬಳಿಯಲ್ಲಿ ಆಧಾರ್ ಕೇಂದ್ರ ತೆರೆಯಲು ತಹಶಿಲ್ದಾರರಿಗೆ ಮನವಿ

ಮಂಡ್ಯ: ಎಲ್ಲಾ ನಾಡಕಛೇರಿಗಳು ಮತ್ತು ಹೋಬಳಿ ಕೇಂದ್ರಗಳಲ್ಲಿ ಆಧಾರ್ ಕೇಂದ್ರಗಳನ್ನು ತೆರೆದು ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನೇನಹಳ್ಳಿ ವೇಣು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.ಮಂಡ್ಯ ಕೆ. ಆರ್.ಪೇಟೆಯಲ್ಲಿ ನೂರಾರು ಕರವೇ ಕಾರ್ಯಕರ್ತರೊಂದಿಗೆ ಮಿನಿ ವಿಧಾನಸೌಧಕ್ಕೆ ತೆರಳಿದ ವೇಣು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿ ಆಧಾರ್ ಕೇಂದ್ರದ ಗೊಂದಲದಿಂದಾಗಿ ಜನಸಾಮಾನ್ಯರಿಗೆ ಬಹಳ ತೊಂದರೆಯಾಗುತ್ತಿದೆ. ಮಧ್ಯರಾತ್ರಿಯ ಸಮಯದಲ್ಲಿಯೇ ಬಂದು ಸರತಿಯ ಸಾಲಿನಲ್ಲಿ ನಿಂತು ತೊಂದರೆ ಅನುಭವಿಸುತ್ತಿರುವ ಜನಸಾಮಾನ್ಯರು ವಾರಗಟ್ಟಲೆ ಅಲೆಯುವಂತಾಗಿದೆ. ದಿನಕ್ಕೆ ಕೇವಲ 20 ಜನರಿಗೆ ಮಾತ್ರ ಟೋಕನ್ ವಿತರಿಸುವ ಆಧಾರ್ ಕೇಂದ್ರದ ಸಂಘಟಕರು, ವಿದ್ಯುತ್ ವ್ಯತ್ಯಯದಿಂದಾಗಿ ಹತ್ತು ಜನರ ಆಧಾರ್ ಅಂಶಗಳನ್ನು ಸರಿಪಡಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೇ ಎಲ್ಲಾ ಗ್ರಾಮ ಪಂಚಾಯತಿ ಕೇಂದ್ರಗಳು, ಹೋಬಳಿ ಕೇಂದ್ರಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಆಧಾರ್ ಕೇಂದ್ರಗಳನ್ನು ಆರಂಬಿಸಲು ಮುಂದಾಗಬೇಕು ಎಂದು ಕರವೇ ಅಧ್ಯಕ್ಷ ವೇಣು ಮತ್ತು ಜಿಲ್ಲಾ ಉಪಾಧ್ಯಕ್ಷ ಸಾಸಲು ಗುರುಮೂರ್ತಿ ಮನವಿ ಮಾಡಿದ್ದಾರೆ..ನೂರಾರು ಕರವೇ ಕಾರ್ಯಕರ್ತರು ಮನವಿ ಸಮರ್ಪಣಾ ಕಾರ್ಯದಲ್ಲಿ ಭಾಗವಹಿಸಿದ್ದರು ‌…..

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *