Breaking News

ಅದ್ದೂರಿಯಾಗಿ ಜರುಗಿದ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

ಮಂಡ್ಯ: ಜಿಲ್ಲೆಯ ಮಣಿಗನಹಳ್ಳಿಯ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ದೇವಿಯ ಜನ್ಮದಿನದ ಅಂಗವಾಗಿ ವರ್ಧಂತಿ ಮಹೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.ನೂರಾರು ಮಹಿಳೆಯರು ವರ್ಧಂತಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.ಮಹೇಶ್ವರಿ ವಂಶಸ್ಥರಾದ ದೇವಾಲಯ ಸಂಚಾಲನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ದಿನೇಶ್ದಂಪತಿಗಳು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ದೇವಿಗೆ ವಿಶೇಷ ಪೂಜೆ ಪುರಸ್ಕಾರಗಳು, ಅಭಿಷೇಕ, ಹೋಮ ಹವನಗಳು ನಡೆದವು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತರು ಹಾಗೂ ಸಾರ್ವಜನಿಕರಿಗೆ ಉಚಿತ ಪ್ರಸಾದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ,ತಾ.ಪಂ ಅಧ್ಯಕ್ಷೆ ಜಯಲಕ್ಷ್ಮೀಸ್ವಾಮಿನಾಯಕ, ಜಿ.ಪಂ ಮಾಜಿಸದಸ್ಯೆಯರಾದ ಸರ್ವಮಂಗಳ, ಅನುಸೂಯಗಂಗಾಧರ ಮತ್ತಿತರರು ವರ್ಧಂತಿ ಮಹೋತ್ಸವದಲ್ಲಿ ಭಾಗವಹಿಸಿದ್ದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *