Breaking News

ರಾಜೀನಾಮೆ ನೀಡಿದ ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ನಿರ್ಧಾರ

ಬೆಂಗಳೂರು:ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ವಾತಾವರಣ ಕಂಡುಬಂದಿದೆ. ಮಧ್ಯಂತರ ಚುನಾವಣೆ ಎದುರಾದರೂ ಪಕ್ಷದ ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದು ಜೆಡಿಎಸ್ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ಪಕ್ಷದ ನಾಯಕರ ಸಭೆ ನಡೆದಿದ್ದು, ವಿಧಾನಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸಬೇಕು. ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸಲು ಎಲ್ಲಾ ನಾಯಕರು ಶ್ರಮಿಸಬೇಕು ಎಂದು ಸೂಚನೆ ನೀಡಲಾಗಿದೆ.ಇನ್ನು ಸರ್ಕಾರ ಪತನಗೊಂಡು ಅನಿಶ್ಚಿತ ವಾತಾವರಣ ನಿರ್ಮಾಣವಾಗಿರುವುದರಿಂದ ಯಾವುದೇ ಸಂದರ್ಭದಲ್ಲಿ ಮಧ್ಯಂತರ ಚುನಾವಣೆ ಬರಬಹುದಾದ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಎಲ್ಲರೂ ಸಿದ್ಧರಾಗಿರಬೇಕು ಎಂದು ಸೂಚನೆ ನೀಡಲಾಗಿದೆ.

Share News

About admin

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *