Breaking News

5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಜೈನಹಳ್ಳಿ ಸತ್ಯನಾರಾಯಣಗೌಡ ಆಯ್ಕೆ

ಮಂಡ್ಯ: ಅಕ್ಕಿಹೆಬ್ಬಾಳು ಗ್ರಾಮದಲ್ಲಿ 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜುಲೈ-31ರಂದು ನಡೆಸಲು ನಿರ್ಧರಿಸಲಾಗಿದ್ದು, ಸಮ್ಮೇಳನಾಧ್ಯಕ್ಷರಾಗಿ ಪ್ರಗತಿಪರ ಚಿಂತಕ, ಸಾಂಸ್ಕೃತಿಕ ಸಂಘಟಕ ಜೈನಹಳ್ಳಿ ಸತ್ಯನಾರಾಯಣಗೌಡ ಆಯ್ಕೆಯಾಗಿದ್ದಾರೆ ಎಂದು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ತಿಳಿಸಿದ್ದಾರೆ.
ಈ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡದ ನುಡಿ ಹಬ್ಬವನ್ನು ಅರ್ಥಪೂರ್ಣವಾಗಿ ನಡೆಸುವ ಸಂಬಂಧ ಕನ್ನಡದ ಎಲ್ಲಾ ಮನಸುಗಳು ಒಂದಾಗಿ ಕೆಲಸ ಮಾಡಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಪೂರ್ಣಚಂದ್ರ ತೇಜಸ್ವಿ ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಸದಸ್ಯ ಬಿ.ಎಲ್.ದೇವರಾಜು, ರಾಮದಾಸು, ತಹಶೀಲ್ದಾರ್ ಎಂ. ಶಿವಮೂರ್ತಿ, ಬಿಇಓ ಎಸ್.ರೇವಣ್ಣ, ಕಸಾಪ ಮಾಜಿ ಅಧ್ಯಕ್ಷರಾದ ಡಾ. ಕೆ.ಕಾಳೇಗೌಡ, ಡಾ.ಎಸ್.ಶ್ರೀನಿವಾಸ ಶೆಟ್ಟಿ, ಕೆ.ಆರ್.ನೀಲಕಂಠ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Share News

About admin

Check Also

VIDEO: ಶಾಲಾ ಆವರಣದಲ್ಲಿ ನಾಗರಹಾವು ಕಚ್ಚು – ಟೀಚರ್ ಸಮಯಪ್ರಜ್ಞೆ ಮೆರೆದ ಕ್ಷಣ..!

SHOCKING: ವಿದ್ಯಾರ್ಥಿನಿಗೆ ನಾಗರಹಾವು ಕಚ್ಚು – ಬಾಯಿಯಿಂದ ವಿಷ ಹೀರಿಸಿ ಪ್ರಾಣ ಉಳಿಸಿದ ಶಿಕ್ಷಕ..! ಚಿತ್ರದುರ್ಗದಲ್ಲಿ ಹೃದಯಕಂಪಿ ಕ್ಷಣ: ಹಾವು …

Leave a Reply

Your email address will not be published. Required fields are marked *