Breaking News

ಆಯುಷ್ ಆರೋಗ್ಯ ಜಾಗೃತಿ ಕಾರ್ಯಕ್ರಮ

ಮಂಡ್ಯ: ಜಿಲ್ಲೆ ಹೊಸಹೊಳಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಆಯುಷ್ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರುಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವು ಯಾವುದೂ ಇಲ್ಲವಾದ್ದರಿಂದ ಮಕ್ಕಳು ನಿಯಮಿತವಾದ ಆಹಾರ ಪದ್ಧತಿಯನ್ನು ಅನುಸರಿಸಿ ಧ್ಯಾನ, ಯೋಗಾಭ್ಯಾಸ ಹಾಗೂ ಸದಾ ಕ್ರಿಯಾಶೀಲ ವ್ಯಕ್ತಿತ್ವವನ್ನು ಅಳವಡಿಸಿಕೊಂಡು ನೂರ್ಕಾಲ ಆರೋಗ್ಯವಂತರಾಗಿ ನೆಮ್ಮದಿಯ ಜೀವನ ನಡೆಸಬೇಕುನಾಲಿಗೆಯ ರುಚಿಯನ್ನು ಕೆರಳಿಸುವ ಜಂಕ್ ಫುಡ್ ಮತ್ತು ಬೇಕರಿ ಆಹಾರ ಪದಾರ್ಥಗಳಿಂದ ದೂರವಿದ್ದು ಸೊಪ್ಪು ತರಕಾರಿ, ಹಣ್ಣು ಹಂಪಲುಗಳನ್ನು ನಿಯಮಿತವಾಗಿ ಸ್ವೀಕರಿಸಬೇಕು ಎಂದು ಕಿವಿಮಾತು ಹೇಳಿದ ಡಾ.ಪುಷ್ಪಾ.. ಆಯುಷ್ ಇಲಾಖೆಯು ನಮ್ಮ ಭಾರತೀಯ ಸಂಸ್ಕೃತಿಯ ಪುರಾತನಆಯುರ್ವೇದ ಪದ್ಧತಿಯ ಒಂದು ಭಾಗವೇ ಆಗಿದ್ದು ಯಾವುದೇ ಅಡ್ಡಪರಿಣಾಮಗಳಿಲ್ಲದ ಆಯುಷ್ ಚಿಕಿತ್ಸಾ ಪದ್ಧತಿಯು ಆರೋಗ್ಯ ಸಂವರ್ಧನೆಗೆ ವರದಾನವಾಗಿದೆ. ನಮ್ಮ ಮನೆಯಲ್ಲಿಯೇ ದೊರೆಯುವ ಮನೆ ಮದ್ದನ್ನು ಬಳಕೆ ಮಾಡುವ ಮೂಲಕ ರೋಗ-ರುಜಿನಗಳು ನಮ್ಮ ಹತ್ತಿರ ಸುಳಿಯದಂತೆ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು… ತಾಲ್ಲೂಕು ಪಂಚಾಯತ ಸ್ಥಾಯಿಸಮಿತಿ ಅಧ್ಯಕ್ಷ ರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರುಪುರಸಭೆಯ ಸದಸ್ಯ ಹೆಚ್.ಆರ್.ಲೋಕೇಶ್, ಪ್ರೌಢಶಾಲಾ ಮುಖ್ಯ ಶಿಕ್ಚಕ ಎಂ.ಕೆ.ಲಕ್ಷ್ಮೇಗೌಡ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ್, ಯೋಗಮಾರ್ಗದರ್ಶಕ ಡಾ.ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್ತಾಲ್ಲೂಕು ಆಯುಷ್ ಅಧಿಕಾರಿ ಡಾ.ಲೋಕೇಶ್, ವೈದ್ಯರಾದ ಡಾ.ಸುಬ್ರಹ್ಮಣ್ಯ, ಡಾ.ಚಂದ್ರಶೇಖರ್ , ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಡಾ.ಕೆ.ಆರ್.ನೀಲಕಂಠ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಶಿಕ್ಷಕರಾದ ಬಿ.ಆರ್.ವೆಂಕಟೇಶ್ ಸ್ವಾಗತಿಸಿದರು, ಶಿಕ್ಷಕ ಕೃಷ್ಣಪ್ಪ ವಂದಿಸಿದರು, ಶಿಕ್ಷಕಿ ಪಿ.ಆರ್.ರೇಖಾ ಕಾರ್ಯಕ್ರಮ ನಿರೂಪಿಸಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *