ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಬೂಕನಕೆರೆ ಹೆಮ್ಮೆಯಪುತ್ರ ರೈತನಾಯಕ, ಅಭಿವೃದ್ಧಿಯಹರಿಕಾರ ಬೂಕನಕೆರೆಯ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಗುವುದು ಎಂದು ನಾರಾಯಣಗೌಡರ ಅಭಿಮಾನಿ ಬಳಗದ ಅಧ್ಯಕ್ಷ . ಚಂದ್ರಮೋಹನ್. ತಿಳಿಸಿದ್ದಾರೆ.ನಾಡಿನ ಮುಖ್ಯಮಂತ್ರಿಗಳಾಗಿ ತಾಲ್ಲೂಕಿನ ಹೆಮ್ಮೆಯ ಪುತ್ರ ಬಿ.ಎಸ್.ಯಡಿಯೂರಪ್ಪ ಅವರುಪ್ರಮಾಣವಚನವನ್ನು ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 6.15ಕ್ಕೆ ಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ಮೈಸೂರು ಚನ್ನರಾಯಪಟ್ಟಣ ರಸ್ತೆಯ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಸಿಹಿವಿತರಣೆ ಹಾಗೂ ಪಟಾಕಿ ಸಿಡಿಸಿ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಅಭಿಮಾನಿ ಬಳಗದ ಅಧ್ಯಕ್ಷ ಚಂದ್ರ ಮೋಹನ್ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





