ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಬೈಕ್ ಸವಾರ ವಸಂತಕುಮಾರ್ ತಲೆಗೆ ತೀವ್ರ ಪೆಟ್ಟಾಗಿರುವ ಘಟನೆಮಂಡ್ಯ ಜಿಲ್ಲೆಯ ಲೋಕೋಪಯೋಗಿ ಕಛೇರಿಯ ಮುಂಭಾಗ ಮೈಸೂರು ಚನ್ನರಾಯಪಟ್ಟಣ ಮುಖ್ಯ ರಸ್ತೆಯಲ್ಲಿ ನಡೆದಿದೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಕೊಂಡೇಗೌಡರ ಪುತ್ರ ವಸಂತಕುಮಾರ್(48) ತಮ್ಮ ಹೀರೋಹೋಂಡಾ ಬೈಕಿನಲ್ಲಿ ಕೆ.ಆರ್.ಪೇಟೆಯಿಂದ ಹೋಗುತ್ತಿದ್ದ ರೈತ ವಸಂತಕುಮಾರ್ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಢಿಕ್ಕಿ ಹೊಡೆದ ಕಾರಣ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಭಾರೀ ರಕ್ತಸ್ರಾವ ವಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವಸಂತಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕಳುಹಿಸಲಾಗಿದೆ.ಗಾಯಾಳು ವಸಂತಕುಮಾರ್ ಅವರ ಬಂಧುಗಳು ಪಟ್ಟಣದ ದುಂಡಶೆಟ್ಟಿಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಬಳಿ ಜಮಾಯಿಸಿದ್ದರು. ಪುರಸಭೆ ಸದಸ್ಯ ಕೆ.ಆರ್.ರವೀಂದ್ರಬಾಬು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳು ವಸಂತಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸಿ ಸೂಕ್ತ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸಾಗಿಸುವಲ್ಲಿ ನೆರವಾದರು. ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





