ಮಂಡ್ಯ: ಜಿಲ್ಲೆಯ ಕೆರೆ ಕಟ್ಟೆಗಳಿಗೆ ನೀರು ಹರಿಸಲು, ಒಣಗುತ್ತಿರುವ ಕಬ್ಬು, ತೆಂಗು, ಅಡಿಕೆ, ಬಾಳೆ ಮುಂತಾದ ಬೆಳೆಗಳನ್ನು ಉಳಿಸಲು, ಕೆ.ಆರ್.ಪೇಟೆ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಯ ಗೊರೂರು ಜಲಾಶಯದಿಂದ 2500ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ. ನೀರಿಲ್ಲದೇ ಒಣಗಿ ಖಾಲಿಯಾಗಿದ್ದ ಹೇಮೆಯ ಒಡಲು ಭರ್ತಿಯಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ದೂರಾಗಿದೆ…ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಹೇಮಾವತಿ ಜಲಾಶಯದ ಎಡದಂಡೆ ನಾಲೆಗೆ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸಿಕೊಡಬೇಕು. ಇಲ್ಲದಿದ್ದರೆ ಆಗಷ್ಟ್ 7ರಂದು ಉಗ್ರವಾದ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ಎಚ್ಚರಿಕೆ ನೀಡಿದ್ದಾರೆ…
bigtvnews | Hubli Dharwad News | Kannada News | Karnataka News Hubli News | News In Hubli | Local news





