ಮಂಡ್ಯ: ಮಂಡ್ಯ ಪಟ್ಟಣದ ಕಸಬಾ ಹೋಬಳಿ ಒಂದನೇ ವೃತ್ತದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಪ್ರಾರಂಭವಾಗಿದ್ದು, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ತಾಲ್ಲೂಕು ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ನಡೆಸಲಾಗುತ್ತಿದ್ದು, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಂದ ಧ್ವಜವಂದನೆ ಸ್ವೀಕರಿಸಿದರು.ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಪಿ.ಜೆ.ವೆಂಕಟರಾಮು ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾಮನೋಭಾವನೆಯನ್ನು ಮೈಗೂಡಿಸಿಕೊಂಡು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಭಾಗವಹಿಸಬೇಕು.ಸೋಲಿಗೆ ಹೆದರದೇ ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಳ್ಳಲು ಸತತವಾದ ಅಭ್ಯಾಸವನ್ನು ಮಾಡಬೇಕು. ವಿದ್ಯಾರ್ಥಿಗಳು ಉತ್ತಮವಾದ ಕ್ರೀಡಾಪಟುಗಳಾಗುವ ಮೂಲಕ ತಾಲ್ಲೂಕಿನ ಕೀರ್ತಿಯನ್ನು ಬೆಳಗಬೇಕು ಎಂದು ಕರೆ ನೀಡಿದರು.ಕಸಬಾ ಕ್ಷೇತ್ರದ ಜಿ.ಪಂ ಸದಸ್ಯ ರಾಮದಾಸು, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಪದ್ಮೇಶ್, ಆನಂದ್, ಪಿ.ಜೆ.ಕುಮಾರ್ ಸೇರಿದಂತೆ ಕಸಬಾ ಹೋಬಳಿ ಒಂದನೇ ವೃತ್ತದ ವ್ಯಾಪ್ತಿಯ ಶಾಲೆಗಳ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು….
bigtvnews | Hubli Dharwad News | Kannada News | Karnataka News Hubli News | News In Hubli | Local news





