Breaking News

ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥ ಹಾಗೂ ಕರಪತ್ರಗಳ ವಿತರಣೆ.

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ನೇತೃತ್ವದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾವನ್ನು ನಡೆಸಲಾಯಿತು.ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಚಂದ್ರಮೌಳಿ ಹಸಿರು ನಿಶಾನೆಯ ಬಾವುಟವನ್ನು ತೋರಿಸುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರುನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕುಡೆಂಗ್ಯೂ, ಚಿಕೂನ್ ಗುನ್ಯಾ ಸೇರಿದಂತೆ ಸೊಳ್ಳೆಗಳು ಕಚ್ಚಿ, ವೈರಸ್ ಗಳ ಮೂಲಕ ಹರಡುವ ರೋಗವಾದ್ದರಿಂದ ಜನಸಾಮಾನ್ಯರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಆರೋಗ್ಯವಂತರಾಗಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಚಂದ್ರಮೌಳಿ ಮನವಿ ಮಾಡಿದರುತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹರೀಶ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಜಗನ್ನಾಥ್, ಹಿರಿಯ ಆರೋಗ್ಯ ಪರೀಕ್ಷಕ ಶೀಳನೆರೆ ಸತೀಶ್, ಧರ್ಮೇಂದ್ರ, ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಚಂದ್ರಶೇಖರ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಜಾಗೃತಿ ಜಾಥದಲ್ಲಿ ಭಾಗವಹಿಸಿದ್ದರು…..

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *