ದಾವಣಗೆರೆ: ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ದೈಹಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಮೈಕ್ರೋ ಪೋನ್ ಬಳಸಿ ನಕಲು ಮಾಡುತ್ತಿದ್ದವರನ್ನು ಬಂಧಿಸುವಲ್ಲಿ ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಹುಬ್ಬಳ್ಳಿ ರೇಲ್ವೆ ಪೊಲೀಸ್ ಠಾಣೆಯ ಪೇದೆ ಮಂಜುನಾಥ, ದಾವಣಗೆರೆ ನಗರದ ನಿಟ್ಟುವಳ್ಳಿ ನಿವಾಸಿ ರಾಜಪ್ಪ ಬಂಧಿತ ಆರೋಪಿಗಳು.೨೦೧೭ ಅಕ್ಟೋಬರ್ ೧೬ ರಂದು ದಾವಣಗೆರೆ ನಗರದ ನೂತನ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ಪತ್ತೆ ಆಗಿದ್ದ ಪ್ರಕರಣದಲ್ಲಿ ಮೊನ್ನೆಯಷ್ಟೆ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಈಗ ಮತ್ತೆ ಇಬ್ಬರು ಆರೋಪಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ೧೬ಕ್ಕೆ ಏರಿಕೆಯಾಗಿದೆ.ರಾಜ್ಯಾದ್ಯಂತ ಹರಡಿದ ಜಾಲದ ಶಂಕೆ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





