Breaking News

ಅದ್ದೂರಿಯಾಗಿ ಜರುಗಿದ ಸಪ್ತಮಾತ್ರಿಕಾ ಹೋಮ, ದಯಾನಂದಪುರಿ ಮಹಾಸ್ವಾಮೀಜಿಗಳ ಬೆಳ್ಳಿ ಪಲ್ಲಕ್ಕಿ ಉತ್ಸವ

ಮಂಡ್ಯ: ಜಿಲ್ಲೆಯ ಕೊರಟಿಕೆರೆ ಗ್ರಾಮದಲ್ಲಿ ಶ್ರೀ ರಾಮಲಿಂಗ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ 4ನೇ ವರ್ಷದ ಭೀಮನ ಅಮವಾಸ್ಯೆ ಕಾರ್ಯಕ್ರಮದ ಅಂಗವಾಗಿ ಸಪ್ತಮಾತ್ರಿಕಾ ಹೋಮ, ದೇವಾಂಗ ಜಗದ್ಗುರುಗಳಾದ ಶ್ರೀ ಶ್ರೀ ದಯಾನಂದಪುರಿ ಮಹಾಸ್ವಾಮೀಜಿಗಳಿಗೆ ಗುರುವಂದನೆ, ಶ್ರೀಗಳ ಬೆಳ್ಳಿಪಲ್ಲಕಿ ಉತ್ಸವ, ಭಕ್ತಿ ಸುಧೆ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು.ಕೊರಟಿಕೆರೆ ಗ್ರಾಮಕ್ಕೆ ಆಗಮಿಸಿದ ಶ್ರೀಗಳ ಮೇಲೆ ಪುಷ್ಪವೃಷ್ಠಿ ಮಾಡಿ, ಕ್ರೇನ್ ಮೂಲಕ ಭಾರೀ ಗಾತ್ರದ ಗುಲಾಬಿ ಹೂವಿನ ಹಾರವನ್ನು ಶ್ರೀಗಳಿಗೆ ಸಮರ್ಪಿಸಲಾಯಿತು.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಿದ ಶ್ರೀಗಳು ನೆರೆದಿದ್ದ ಸಾವಿರಾರು ಭಕ್ತಾಧಿಗಳನ್ನು ಉದ್ಧೇಶಿಸಿ ಮಾತನಾಡಿದ ಶ್ರೀಗಳು ಇಂದಿನ ಒತ್ತಡದ ಜೀವನದಲ್ಲಿ ದೇವರು ಮತ್ತು ಧರ್ಮದ ಮಾರ್ಗದಿಂದ ಮಾತ್ರ ಮಾನಸಿಕ ನೆಮ್ಮದಿಯನ್ನು ಪಡೆದುಕೊಂಡು ಯಶಸ್ಸಿನ ಹಾದಿಯಲ್ಲಿ ಸಾಗಿ ಗುರಿಮುಟ್ಟಬಹುದು. ಕೊರಟಿಕೆರೆ ಗ್ರಾಮಸ್ಥರು ಭೀಮನ ಅಮಾವಾಸ್ಯೆಯ ಅಂಗವಾಗಿ ಸಪ್ತಮಾತ್ರಿಕಾ ಹೋಮ ನಡೆಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಕೆಲಸವು ಇಡೀ ಸಮಾಜಕ್ಕೆ ಮಾದರಿಯಾಗಿದೆ. ಮಾನವರಾದ ನಾವು ಅಜ್ಞಾನದ ಅಂಧಕಾರದಿಂದ ಹೊರಬಂದು ಜ್ಞಾನದ ಮಾರ್ಗದಲ್ಲಿ ಸಾಗಲು ದೇವರು ಮತ್ತು ಧರ್ಮದ ಮಾರ್ಗವು ಅವಶ್ಯಕವಾಗಿ ಬೇಕಾಗಿದೆ.ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಉಳ್ಳವರು ಶೋಷಿತರು ಮತ್ತು ತುಳಿತಕ್ಕೊಳಗಾದ ಜನರಿಗೆ ಕೈಲಾದ ಸಹಾಯವನ್ನು ಮಾಡುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಬೇಕು. ಸಮಾಜದಲ್ಲಿ ಅಸಂಘಟಿತರಾಗಿರುವ ನೇಕಾರ ಬಂಧುಗಳು ಸಂಘಟಿತರಾಗಿ ತಮಗೆ ಸಿಗಬೇಕಾದ ನ್ಯಾಯಬದ್ಧವಾದ ಸೌಲಭ್ಯಗಳನ್ನು ಪಡೆದುಕೊಂಡು ಅಭಿವೃದ್ಧಿಯ ಪಥದತ್ತ ಸಾಗಬೇಕು ಎಂದು ಶ್ರೀಗಳು ಮನವಿ ಮಾಡಿದರು.ಜಿ.ಪಂ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಜಾನಕೀರಾಂ, ತಾ.ಪಂ ಸದಸ್ಯ ಮೋಹನ್, ತಾ.ಪಂ ಮಾಜಿಅಧ್ಯಕ್ಷೆ ವಿಜಯಲಕ್ಷ್ಮಿರಾಜಶೇಖರ್, ದೇವಾಂಗ ಪೀಠದ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ತಿಮ್ಮಶೆಟ್ಟಿ, ಸಂಘದ ರಾಜ್ಯಪ್ರಧಾನ ಸಂಘಟನಾ ಕಾರ್ಯದರ್ಶಿ ಎಂ.ಪಿ.ಉಮಾಶಂಕರ್, ಹೊಳೆನರಸೀಪುರ ತಾಲೂಕು ದೇವಾಂಗ ಸಂಘದ ಅಧ್ಯಕ್ಷ ಡಾ.ರಾಜೇಶ್, ಸಮಾಜದ ಮುಖಂಡರಾದ ಮಂಜುನಾಥ, ಕಾಂತರಾಜು, ಭಗೀರಥ, ಲತಾಅಶೋಕ, ಶಿವರುದ್ರಯ್ಯ, ಕಿಟ್ಟಣ್ಣ, .ನಾಗೇಶ್, ರಾಧಗೋವಿಂದರಾಜು, ಗ್ರಾ.ಪಂ ಉಪಾಧ್ಯಕ್ಷೆ ಶೋಭಾ, ರಂಗಪ್ಪ ಮತ್ತಿತರರು ಭಾಗವಹಿಸಿದ್ದರು.ವೇದಬ್ರಹ್ಮ ಶ್ರೀ ಶ್ರೀಧರಶರ್ಮಾ ನೇತೃತ್ವದ ಆಗಮಿಕರ ತಂಡವು ಸಪ್ತಮಾತ್ರಿಕಾ ಹೋಮ ಮತ್ತು ವಿಶೇಷ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ನಾಡಿನ ಖ್ಯಾತ ಸುಗಮ ಸಂಗೀತ ಗಾಯಕ ಯರಹಳ್ಳಿ ಪುಟ್ಟಸ್ವಾಮಿ ನೇತೃತ್ವದ ತಂಡವು ಭಕ್ತಿಸುಧೆ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಕೆ.ಆರ್.ನೀಲಕಂಠ ಕಾರ್ಯಕ್ರಮ ನಡೆಸಿಕೊಟ್ಟರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *