ಕೋಲಾರ : ಟಿಪ್ಪು ಜಯಂತಿ ರದ್ದು ಮಾಡಿದ ಬಿಜೆಪಿ ಸರ್ಕಾರದ ವಿರುದ್ದ ಟಿಪ್ಪು ಸೆಕ್ಯೂಲರ್ ಸೇನೆ, ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಟಿಪ್ಪು ಜಯಂತಿಯನ್ನು ರದ್ದು ಮಾಡಿರುವ ಆದೇಶವನ್ನು ವಾಪಸ್ ಪಡೆಯಲು ಆಗ್ರಹಿಸಿ
ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
-ಸಿಎಂ ಯಡಿಯೂರಪ್ಪ ಧರ್ಮಗಳನ್ನ ಹೊಡೆಯುವ ಕೆಲಸಕ್ಕೆ ಕೈ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟಿಸಲಾಯಿತು.ರಾಜ್ಯ ಸರ್ಕಾರ ಆದೇಶ ವಾಪಸ್ಸು ಪಡೆಯದಿದ್ದರೆ ಟಿಪ್ಪು ಸೆಕ್ಯೂರಲ್ ಸೇನೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾನಿರತರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





