Breaking News

ಸಂಭ್ರಮ ಸಡಗರದಿಂದ ಜರುಗಿದ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ದಸರಾ ದರ್ಭಾರ್ ಮೆರವಣಿಗೆ

ಮಂಡ್ಯ: ಜಿಲ್ಲೆಯ ಕೊರಟಿಕೆರೆ ಗ್ರಾಮದಲ್ಲಿ 4ನೇ ವರ್ಷದ ಭೀಮನ ಅಮಾವಾಸ್ಯೆಯ ಅಂಗವಾಗಿ ತಾಯಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ದಸರಾ ದರ್ಭಾರ್ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ‌ಮಂಡ್ಯ ಕೃಷ್ಣರಾಜಪೇಟೆ ತಾಲ್ಲೂಕಿನ ಕೊರಟಿಕೆರೆ ಗ್ರಾಮದಲ್ಲಿ 4ನೇ ವರ್ಷದ ಭೀಮನ ಅಮಾವಾಸ್ಯೆಯ ಅಂಗವಾಗಿ ಸಪ್ತಮಾತ್ರಿಕಾ ಹೋಮ, ತಾಯಿ ರಾಮಲಿಂಗ ಚೌಡೇಶ್ವರಿ ಅಮ್ಮನವರ ಆನೆಯ ಅಂಬಾರಿಯ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು.. ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಮಠದಿಂದ ಆಗಮಿಸಿದ್ದ ಆನೆಯು ತಾಯಿಯ ಉತ್ಸವ ಮೂರ್ತಿಯನ್ನು ಗ್ರಾಮದಲ್ಲಿ ಪ್ರದಕ್ಷಿಣೆ ಹಾಕಿ ಭಕ್ತಿಯ ಪರಾಕಾಷ್ಠೆಯನ್ನು ಪ್ರದರ್ಶನ ಮಾಡಿತು..ನಡೆಮುಡಿಯ ಮೇಲೆ ಬಾಲಕಿಯರು ಶ್ರೀ ಚಾಮುಂಡೇಶ್ವರಿ ದೇವಿಯ ಕರಗದ ಕಳಶಗಳನ್ನು ತಲೆಯ ಮೇಲೆ ಹೊತ್ತು ಮೆರವಣಿಗೆ ಮಾಡಿದರು..ಉಧ್ಯಮಿ ಬಿ.ರಾಜಶೇಖರ್ ದಂಪತಿಗಳು ಅಂಬಾರಿಯನ್ನು ಹೊತ್ತಿದ್ದ ಆನೆ ಗೌರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು…ನಾಡಿನ ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದರ್ಶನ ಪಡೆದು ಕೃತಾರ್ಥರಾದರು…

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *