Breaking News

ಟಿಪ್ಪು ಸುಲ್ತಾನ್ ಜಯಂತಿ ರದ್ದು ಪಡಿಸಿರುವುದನ್ನು ಖಂಡಿಸಿ ಹು-ಧಾ ಮಹಾನಗರಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ರದ್ದು ಪಡಿಸಿದ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಕಾಂಗ್ರೆಸ್ ವತಿಯಿಂದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಏಕಾಏಕಿ ರಾಜ್ಯ ಸರ್ಕಾರ ಟಿಪ್ಪು ಜಯಂತಿ ರದ್ದು ಪಡಿಸಿರುವುದು ಖಂಡನೀಯವಾಗಿದೆ.ಸ್ವಾತಂತ್ರ ಹೋರಾಟಗಾರ ಟಿಪ್ಪು ಸುಲ್ತಾನ್ ನಾಡಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಬಿಜೆಪಿ ಸರ್ಕಾರ ಈ ರೀತಿ ಏಕಾಏಕಿ ಜಯಂತಿ ರದ್ದು ಮಾಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಜಯಂತಿ ರದ್ದು ಪಡಿಸುವ ಮೂಲಕ ಬಿಜೆಪಿ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.ಬಿಜೆಪಿ ಸರ್ಕಾರ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಕೂಡಲೇ ಟಿಪ್ಪು ಜಯಂತಿ ಆಚರಣೆ ರದ್ದು ಹಿಂಪಡೆದು ಆಚರಣೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು. ಒಂದುವೇಳೆ ರದ್ದು ಹಿಂಪಡೆಯದಿದ್ದರೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಅನೀಲಕುಮಾರ ಪಾಟೀಲ, ನವೀದ ಮುಲ್ಲಾ, ರಜತ ಉಳ್ಳಾಗಡ್ಡಿಮಠ, ಅಲ್ತಾಫ್ ಹಳ್ಳೂರ,ಸದಾನಂದ ಡಂಗನವರ ಸೇರಿದಂತೆ ಇತರರು ಇದ್ದರು.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *