ಕೋಲಾರ: ಬಂಗಾರಪೇಟೆ ಪಟ್ಟಣದ ಷಣ್ಮುಗ ಫೈನಾನ್ಸ್ ಹಾಗೂ ಚಿಟ್ ಫಂಡ್ ಖಾಸಗಿ ಕಂಪನಿಯಿಂದ ಸಾವಿರಾರು ಜನರಿಗೆ ಮೋಸ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ಪ್ರಾರಂಭವಾಗಿದೆ.
ಒಂದು ವರ್ಷದ ಹಿಂದೆಯೇ ಈ ಕಂಪನಿ ವಂಚನೆಯ ಬಗ್ಗೆ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಹೂಡಿಕೆಯ ಹಣ ವಾಪಸು ಕೊಡಿಸುವಂತೆ ಕೆಜಿಎಫ್ ಎಸ್ ಪಿ ಮೊಹಮ್ಮದ್ ಸುಜೀತ್ ಗೆ ಮನವಿ ಮಾಡಿಕೊಂಡಿದ್ದಾರೆ.
ಸರ್ಕಾರಿ ನೌಕರರು ಸೇರಿದಂತೆ ಸಾವಿರಾರು ಜನರಿಂದ ಷುಣ್ಮುಗ ಕಂಪನಿಯಲ್ಲಿ ಹಣ ತೊಡಗಿಸಿದ್ದಾರೆ.
ತೆರಿಗೆ ಇಲಾಖೆಯ ಭಯದಿಂದ ದೂರು ಕೊಡಲು ಹಲವರ ಹಿಂದೇಟು ಹಾಕಿದ್ದರು. ಹೀಗಾಗಿ ವಂಚನೆಗೆ ಒಳಗಾದವರೊಗೆ ಪ್ರತ್ಯೇಕವಾಗಿ ದೂರು ನೀಡುವಂತೆ ಎಸ್ ಪಿ ಸೂಚನೆ ನೀಡಿದ್ದಾರೆ.
ಬಂಗಾರಪೇಟೆ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ಮುಂದುವರೆದಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





