ಮಂಡ್ಯ; ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಆಗಷ್ಟ್ 3ರ ಶನಿವಾರ ಬೆಳಿಗ್ಗೆ 10ಗಂಟೆಗೆ ಅಖಿಲ ಭಾರತ ವೀರಶೈವ ಮಹಾಸಭಾದ ಕೆ.ಆರ್.ಪೇಟೆ ತಾಲ್ಲೂಕು ಘಟಕದ ವತಿಯಿಂದ ಬಸವಜಯಂತಿ, ಬಸವಶ್ರೀ ಕಾಯಕಯೋಗಿ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು ಶ್ರೀರಂಗ ಚಿತ್ರಮಂದಿರದ ಆವರಣದಲ್ಲಿ ನಡೆಯಲಿದೆ ಎಂದು ಮಹಾಸಭಾದ ಅಧ್ಯಕ್ಷ ವಿ.ಎಸ್.ಧನಂಜಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಬಸವಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶ್ರೀ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ತೆಂಡೇಕೆರೆ ಬಾಳೆಹೊನ್ನೂರುಶಾಖಾ ಮಠದ ಗಂಗಾಧರಸ್ವಾಮೀಜಿ, ಚಂದ್ರವನ ಆಶ್ರಮದ ತ್ರಿನೇತ್ರಮಹಾಂತ ಶಿವಯೋಗಿ ಸ್ವಾಮೀಜಿ, ವಿರೂಪಾಕ್ಷ ರಾಜಯೋಗಿಗಳು, ಬೇಬಿಬೆಟ್ಟದ ಗುರುಸಿದ್ಧೇಶ್ವರ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀ ಚನ್ನವೀರಯ್ಯ ಸ್ವಾಮೀಜಿ ಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಾದಬಿ.ಎಸ್.ಯಡಿಯೂರಪ್ಪ, ಅನರ್ಹ ಶಾಸಕ ನಾರಾಯಣಗೌಡ, ಮಾಜಿಸಚಿವ ಸಿ.ಎಸ್.ಪುಟ್ಟರಾಜು, ಮಾಜಿಶಾಸಕ ಅಶೋಕ್ ಖೇಣಿ,ಸಂಸದೆ ಸುಮಲತಾ, ಅಖಿಲಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಧನಂಜಯ ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಘಟಕದ ಉಪಾಧ್ಯಕ್ಷೆ ರಾಣಿಜಗಧೀಶ್, ಡಿ.ಸಿ.ಕುಮಾರ್, ಕಾರ್ಯದರ್ಶಿ ಗೋವಿಂದನಹಳ್ಳಿ ಶಿವಶಂಕರ್,ಖಜಾಂಚಿ ಎಂ.ಎಸ್.ಶಿವಮೂರ್ತಿ, ಸಂಘಟನಾ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ವಡ್ಡರಹಳ್ಳಿ ಶಿವಕುಮಾರ್, ಜ್ಯೋತಿ ಹರೀಶ್, ಪುಷ್ಪರಮೇಶ್, ಮೀನಾಕ್ಷಿಲಿಂಗರಾಜು, ಯುವಕಾರ್ಯದರ್ಶಿ ತೀರ್ಥೇಶ್ ಮತ್ತಿತರರು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





