ಮಂಡ್ಯ: ಜಿಲ್ಲೆಯ ಕೆ. ಆರ್. ಪಟ್ಟಣದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವು ಶಿಕ್ಷಕರ ಭವನದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಷೇತ್ರಸಮನ್ವಯಾಧಿಕಾರಿ ಲಿಂಗರಾಜು ಮಾತನಾಡಿ ವಿದ್ಯಾರ್ಥಿಗಳು ವೈಜ್ಞಾನಿಕ ಜಾಗೃತಿಯನ್ನು ಮೈಗೂಡಿಸಿಕೊಂಡು ಹೊಸಹೊಸ ವಿಜ್ಞಾನ ತಂತ್ರಜ್ಞಾನದ ಆವಿಷ್ಕಾರಕ್ಕೆ ಮುಂದಾಗಿ ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಕಾಣಿಕೆಯನ್ನು ನೀಡಬೇಕು.ಸೃಜನಶೀಲತೆ, ವಿಜ್ಞಾನಚಿಂತನೆ ಮತ್ತು ಸಮಗ್ರವಾದ ವ್ಯಕ್ತಿತ್ವವನ್ನು ಅಳವಡಿಸಿಕೊಂಡು ಮೂಲ ವಿಜ್ಞಾನದ ಸಂಶೋಧನೆಗಳ ಫಲವನ್ನು ಸದ್ಬಳಕೆ ಮಾಡಿಕೊಂಡು ಮುನ್ನಡೆಯಬೇಕು ಎಂದು ಲಿಂಗರಾಜು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ, ಶಿಕ್ಷಣ ಸಂಯೋಜಕಿ ನೀಲಾಮಣಿ, ನಾಗೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





