Breaking News

15 ರಂದು ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಿಸಲು ನಿರ್ಧಾರ

ಮಂಡ್ಯ: ಜಿಲ್ಲೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ತಾಲ್ಲೂಕು ಕ್ರೀಡಾಂಗಣದಲ್ಲಿ ಆಗಷ್ಟ್ 15ರಂದು ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಆಚರಿಸಲು ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಯಿತು.ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಯೋಧರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ತಾಲ್ಲೂಕು ಆಡಳಿತದ ವತಿಯಿಂದಸನ್ಮಾನಿಸಿ ಗೌರವಿಸುವುದು. ಸ್ವಾತಂತ್ರ್ಯ ಸಂಭ್ರಮದ ಮಹತ್ವವನ್ನು ಸಾರುವ ಸ್ಥಬ್ದ ಚಿತ್ರಗಳ ಮೆರವಣಿಗೆ ಸೇರಿದಂತೆ ನಾಡುನುಡಿಯ ಮಹತ್ವವನ್ನು ಸಾರುವ ನೃತ್ಯಪ್ರದರ್ಶನ ರೂಪಕಗಳನ್ನು ಆಯೋಜಿಸಲು ನಿರ್ಧರಿಸಲಾಯಿತು.ತಾಲ್ಲೂಕಿನ ಎಲ್ಲಾ ಸರ್ಕಾರಿ ನೌಕರರು, ಜನಪ್ರತಿನಿಧಿಗಳು, ವಿವಿಧ ಪ್ರಗತಿಪರ ಸಂಘಸಂಸ್ಥೆಗಳ ಪ್ರತಿನಿಧಿಗಳು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಭಾರತಾಂಭೆಗೆ ನಮನಗಳನ್ನು ಸಲ್ಲಿಸಲು ನಿರ್ಧರಿಸಲಾಯಿತು.. ಸಭೆಯಲ್ಲಿ ಜಿ.ಪಂ ಸದಸ್ಯ ರಾಮದಾಸು, ಬಿಇಓ ಎಸ್.ರೇವಣ್ಣ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ಉದ್ಯೋಗ ಖಾತ್ರಿ ಯೋಜನಾ ನಿರ್ದೇಶಕಿ ಮೇನಕಾದೇವಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು…

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *