Breaking News

ರಾಜ್ಯದಲ್ಲಿ ಬಿಜೆಪಿಯ ಆಡಳಿತದ ಬಗ್ಗೆ ವಿಶ್ವಾಸವಿದೆ: ಅನಿತಾ ಕುಮಾರಸ್ವಾಮಿ

ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಯಾರಿಗೂ ತೊಂದರೆ ಮಾಡಿಲ್ಲ. ಆದರೆ ಮೈತ್ರಿ ಸರ್ಕಾರದಿಂದ ಸಣ್ಣ ರಾಜಕೀಯ ಮಾಡಲಾಯಿತು. ಆದರೆ ಈಗ ಬಿಜೆಪಿಯವರು ಆ ರೀತಿಯ ಸಣ್ಣರಾಜಕೀಯ ಮಾಡುವುದಿಲ್ಲವೆಂಬ ವಿಶ್ವಾಸವಿದೆ ಎಂದು ಶಾಸಕಿ ಅನಿತಾಕುಮಾರಸ್ವಾಮಿ ಹೇಳಿದರು.
ರಾಮನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಕ್ಷೇತ್ರದ ಅಭಿವೃದ್ದಿಗೆ ತೊಂದರೆಯಾಗುವ ವಿಚಾರದ ಕುರಿತು ಮಾತನಾಡಿ, ಕ್ಷೇತ್ರದ ಅಭಿವೃದ್ದಿಯನ್ನು ಮುಂದಿನ ದಿನಗಳಲ್ಲಿ ನೀವೆ ನೋಡಿ ಎಂದರು.
ಅತೃಪ್ತರ ಕ್ಷೇತ್ರದಲ್ಲಿ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯ ವಿಚಾರವಾಗಿ ಮಾತನಾಡಿದ ಅವರು, ಸದ್ಯಕ್ಕೆ ಸ್ಪರ್ಧೆಯ
ಕುರಿತು ಯಾವ ಮಾತುಕತೆಯೂ ನಡೆದಿಲ್ಲ. ನಿಖಿಲ್
ಸದ್ಯ ಹೊಸ ಪ್ರೊಡಕ್ಷನ್ ನಲ್ಲಿ ಸಿನಿಮಾಗೆ ಸಹಿ ಮಾಡಿದ್ದಾನೆ ಎಂದು ತಿಳಿಸಿದರು.
ರಾಮನಗರದಲ್ಲಿನ ರಾಜೀವ್ ಗಾಂಧಿ ಯೂನಿವರ್ಸಿಟಿ ಆದಷ್ಟು ಬೇಗ ಪ್ರಾರಂಭವಾಗಲಿದೆ
ಅಧಿಕಾರಿಗಳ ಜೊತೆಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುವುದು,ವಿವಿಗೆ ಭೂಮಿ ನೀಡಲು ಎಲ್ಲಾ ರೈತರು ಒಪ್ಪಿಕೊಂಡಿದ್ದಾರೆ. ಅಡತಡೆಗಳೆಲ್ಲ ನಿವಾರಣೆಯಾಗಿದೆ ಯಾವುದೇ ಸಮಸ್ಯೆ ಇಲ್ಲ ಎಂದರು.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *