Breaking News

ಆ. 3 ರಂದು ಕುಮಾರಸ್ವಾಮಿಯವರೊಂದಿಗೆ ಕಾರ್ಯಕರ್ತರ ಸಂವಾದ ಕಾರ್ಯಕ್ರಮ

ಮಂಡ್ಯ: ಆಗಷ್ಟ್ 3ರ ಶನಿವಾರ ಮಧ್ಯಾಹ್ನ 4ಗಂಟೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಭೇಟಿ ನಡೆಸಿ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಾಗುವದು ಎಂದು ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ವೆಂಕಟಸುಬ್ಬೇಗೌಡ ತಿಳಿಸಿದರು. ‌ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರಚಿಸಲು ಕಾರ್ಯಕರ್ತರ ಜೊತೆ ಸಂವಾದ ಏರ್ಪಡಿಸಲಾಗುತ್ತದೆ.ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಗಮಿಸುತ್ತಿದ್ದು ಮಧ್ಯಾಹ್ನ 4ಗಂಟೆಗೆ ಕೆ.ಆರ್.ಪೇಟೆ ಪಟ್ಟಣದ ಯಶಸ್ವಿನಿ ಸಮುದಾಯ ಭವನದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಉಪಚುನಾವಣೆಯಲ್ಲಿ ಅಭ್ಯರ್ಥಿಯ ಆಯ್ಕೆ, ಗೆಲುವಿನ ರಣತಂತ್ರ ಕುರಿತು ಸಮಾಲೋಚನೆ ನಡೆಸಿ ಕಾರ್ಯಕರ್ತರ ಜೊತೆ ಸಂವಾಧ ನಡೆಸಲಿದ್ದಾರೆ.ಆದ್ದರಿಂದ ಜೆಡಿಎಸ್ ಕಾರ್ಯಕರ್ತರು, ಕುಮಾರಣ್ಣ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರವು ಮತ್ತೊಮ್ಮೆ ಜೆಡಿಎಸ್ ತೆಕ್ಕೆಗೆ ಬರುವ ನಿಟ್ಟಿನಲ್ಲಿ ಈಗಿನಿಂದಲೇ ಸಜ್ಜಾಗಬೇಕು ವೆಂಕಟಸುಬ್ಬೇಗೌಡ ಮನವಿ ಮಾಡಿದ್ದಾರೆ.

Share News

About admin

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *