ಮಂಡ್ಯ: ಕೃಷಿ ಪಂಪ್ ಸೆಟ್ ಚಾಲನೆ ಮಾಡಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಸ್ಪರ್ಷಗೊಂಡು ರೈತ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮಂದಗೆರೆ ಗ್ರಾಮದಲ್ಲಿ ನಡೆದಿದೆ.
ಮಂದಗೆರೆ ಗ್ರಾಮದ ಲೇಟ್ ರಂಗಶೆಟ್ಟಿ ಅವರ ಮಗ ಎಂ.ಆರ್. ರವಿ(35) ಮೃತ ರೈತ.
ಇಂದು ಬೆಳಿಗ್ಗೆ ಮಂದಗೆರೆ ಗ್ರಾಮದಲ್ಲಿರುವ ಕೃಷಿ ಪಂಪ್ ಸೆಟ್ ಚಾಲನೆ ಮಾಡಲು ಮುಂದಾಗಿದ್ದಾರೆ. ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ಗೊತ್ತಿಲ್ಲದೆ ತುಳಿದ ಪರಿಣಾಮ ವಿದ್ಯುತ್ ಸ್ಪರ್ಷಗೊಂಡು ಅಸ್ವಸ್ಥಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತ ರೈತನ ರವಿ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.
ಕಿಕ್ಕೇರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





