Breaking News

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಚುರುಕು: ಡಿಸಿ ಬೊಮ್ಮನಹಳ್ಳಿ

ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯಲ್ಲಿನ 41 ಪ್ರವಾಹ ಪೀಡಿತ ಗ್ರಾಮಗಳಲ್ಲಿನ ಜನರನ್ನು
ಈಗಾಗಲೇ 10 ಜನ ವಸತಿ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಹೇಳಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ಸ ನೀರು ಹರಿದು ಬರಲಿದೆ. ಇಂದು ಮಧ್ಯಾನದ ವರೆಗೆ 2 ಎನ್ ಡಿ ಆರ್ ಎಪ್ ತಂಡ ಚಿಕ್ಕೋಡಿಗೆ ಆಗಮಿಸಲಿದೆ.
ಈ ತಂಡ 60 ಸಿಬ್ಬಂದಿಗಳನ್ನು ಹೊಂದಿದ್ದು,
ರಕ್ಷಣಾ ಕಾರ್ಯದಲ್ಲಿ 25 ಬೋಟ್ ಗಳನ್ನು ಬಳಿಸಲಾಗಿದೆ ಎಂದರು.
ಅಲ್ಲದೇ ತುರ್ತು ಪರಿಸ್ಥಿತಿ ನಿರ್ವಹಣೆಗೆ 20X7 ಹೆಲ್ಪಲೈನ ತೆರೆಯಲಾಗಿದೆ. ಭಾರತೀಯ ಸೇನೆ, ರಾಜ್ಯ, ಕೇಂದ್ರ ವಿಪತ್ತು ನಿರ್ವಹಣಾ ತಂಡದಿಂದ ಕಾರ್ಯಾಚರಣೆ ನಡೆಸಲಾಗುವುದು.
ಮಹಾರಾಷ್ಟ್ರದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಮಳೆ ಆಗಿರುವ ಎಲ್ಲಾ ನೀರು ಸಹ ಕೃಷ್ಣಾ ನದಿಗೆ ಬರು ಸಾದ್ಯತೆ ಇದೆ. ಇನ್ನು ಕೆಲವು ತಗ್ಗು ತೋಟದ ವಸತಿ ಪ್ರದೇಶದಿ ಹೊರಗೆ ಬಾರದೆ ಸಹಕಾರ ಕೊಡುತ್ತಿಲ್ಲ. ಹೀಗಾಗಿ ಕೂಡಲೇ ಎಲ್ಲರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಡಿ ಸಿ ಮನವಿ ಮಾಡಿಕೊಂಡರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *